ಬೆಂಗಳೂರು: ಸಿಎಂ ಯಡಿಯೂರಪ್ಪ ಏಟಿಗೆ ಎದುರಾಳಿಗಳಿಂದ ತಿರುಗೇಟು ಕೊಡಲು ಪ್ಲ್ಯಾನ್ ನಡೆದಿದೆ. ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಡ ಹೆಚ್ಚಿದೆ. ಹೀಗಾಗಿ ಜೂನ್ 15ರ ಬಳಿಕ ಅಸಲಿ ಅಖಾಡ ಶುರುವಾಗುತ್ತಾ ಎಂಬ ಕುತೂಹಲ ಮನೆ ಮಾಡಿದೆ.
ಸದ್ಯ ರಾಜ್ಯ ರಾಜಕೀಯದಲ್ಲಿ ಯಡಿಯೂರಪ್ಪ ಒಂದು ಅಸ್ತ್ರ, ವಿರೋಧಿಗಳದ್ದು ಇನ್ನೊಂದು ಅಸ್ತ್ರ. ನಿಷ್ಠರದ್ದು ಮತ್ತೊಂದು ಅಸ್ತ್ರ ಎನ್ನುವಂತಾಗಿದ್ದು, ಹಾಗಾದ್ರೆ ಹೈಕಮಾಂಡ್ ಬ್ರಹ್ಮಾಸ್ತ್ರ ಯಾವುದು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಯಾಗ್ತಿದೆ. ಇದನ್ನೂ ಓದಿ: ಯಡಿಯೂರಪ್ಪ ಪರವಾಗಿ 65ಕ್ಕೂ ಹೆಚ್ಚು ಶಾಸಕರ ಸಹಿ: ರೇಣುಕಾಚಾರ್ಯ
ಈ ನಡುವೆ ನಿನ್ನೆ ವಿರೋಧಿ ಬಣದ ಅರವಿಂದ ಬೆಲ್ಲದ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಾಯಿಸಿದ್ರು. ಇವತ್ತು ವರಿಷ್ಠರ ಮಧ್ಯಪ್ರವೇಶಕ್ಕೆ ನಿಷ್ಠ ಬಣದ ಶಾಸಕ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ. ಇದನ್ನೆಲ್ಲ ನೋಡಿದದ್ರೆ ಬಿಜೆಪಿ ಮನೆಯ ಕೆಂಡ ಇನ್ನೂ ಆರಿಲ್ಲ ಎನ್ನುವುದು ಗೊತ್ತಾಗುತ್ತದೆ.
ಕಳೆದ 3 ದಿನದಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳಿತಲ್ಲ.ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲವಾದ್ದರಿಂದ ಪಕ್ಷದ ವರಿಷ್ಠರು ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು. @nalinkateel @CTRavi_BJP
— Sunil Kumar Karkala (@karkalasunil) June 8, 2021
ಇದರ ಬೆನ್ನಲ್ಲೇ ರೇಣುಕಾಚಾರ್ಯರ ಸಹಿ ಸಂಗ್ರಹಕ್ಕೆ ಪಕ್ಷ ನಿಷ್ಠರಿಂದ ತಕರಾರು ಶುರುವಾಗಿದ್ದು, ಶಾಸಕರ ಸಹಿ ಸಂಗ್ರಹಕ್ಕೆ ವಿಧಾನಸಭೆ ಮುಖ್ಯ ಸಚೇತಕ, ಶಾಸಕ ಸುನೀಲ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವುದು ಸ್ಪಷ್ಟವಾಗಿದೆ. ನಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಮಾಡುವಂತೆ ಸುನೀಲ್ ಕುಮಾರ್ ಆಗ್ರಹ ಸಾಕಷ್ಟು ಬೆಳವಣಿಗೆಗಳಿಗೆ ಕಾರಣ ಆಗಬಹುದು.
ಕಳೆದ 3 ದಿನದಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳಿತಲ್ಲ.ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲವಾದ್ದರಿಂದ ಪಕ್ಷದ ವರಿಷ್ಠರು ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಸುನೀಲ್ ಕುಮಾರ್ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಲ್ಲಿ ಮನವಿ ಮಾಡಿದ್ದಾರೆ.