ಬಿಜೆಪಿ ಸರ್ಕಾರದಿಂದ ಕನ್ನಡಕ್ಕೆ ಅವಮಾನ: ಆಮ್ ಆದ್ಮಿ ಪಕ್ಷದಿಂದ ಖಂಡನೆ

Public TV
2 Min Read
Bengaluru AAP

ಬೆಂಗಳೂರು: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರ್ನಾಟಕ ಆಕ್ರಮಿತ ಪ್ರದೇಶ ಎಂದು ತಲೆಕೆಟ್ಟ ಹೇಳಿಕೆ ನೀಡಿದ್ದಾರೆಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಟೀಕಿಸಿದೆ.

ಶಾಂತಿಪ್ರಿಯರಾದ ಕನ್ನಡಿಗರು ಹಾಗೂ ಮರಾಠಿಗರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅಚಾನಕ್ ಆಗಿ ಮುಖ್ಯಮಂತ್ರಿ ಹುದ್ದೆ ಗಿಟ್ಟಿಸಿಕೊಂಡಿರುವ ಉದ್ಧವ್ ಠಾಕ್ರೆ, ದೆಹಲಿ ಮಾದರಿಯಲ್ಲಿ ನಿಮ್ಮ ಮಹಾರಾಷ್ಟ್ರ ಅಭಿವೃದ್ಧಿ ಮಾಡಿ, ಕರ್ನಾಟಕಕ್ಕಿಂತ ಹಿಂದುಳಿದಿರುವ ನೀವು ನಿಮ್ಮ ರಾಜ್ಯದ ಅಭಿವೃದ್ಧಿ ಕಡೆ ಮೊದಲು ಗಮನಕೊಡಿ ಎಂದು ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ, ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಕಿಡಿಕಾರಿದ್ರು.

uddhav thackeray

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಆಮ್ ಆದ್ಮಿ ಪಕ್ಷದ ನಾಯಕರು, ಕರ್ನಾಟಕ ರಾಜ್ಯಕ್ಕೆ ಎರಡು ದಿನಗಳ ಕಾಲ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಂಕುಸ್ಥಾಪಿಸಿದ ಭದ್ರಾವತಿಯ ಆರ್‍ಎಎಫ್ ಘಟಕದ ಅಡಿಗಲ್ಲಿನಲ್ಲಿ ಹಿಂದಿ, ಆಂಗ್ಲ ಭಾಷೆ ಮಾತ್ರ ಬಳಸಿ ಕನ್ನಡಕ್ಕೆ ಅವಮಾನ ಮಾಡಲಾಗಿದೆ. ಕನ್ನಡದ ಅಡಿಗಲ್ಲು ಹಾಕದೇ ಇರುವುದನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಮುಂದಿನ 15 ದಿನಗಳ ಒಳಗೆ ಸರ್ಕಾರವೇ ಮುಂದೆ ನಿಂತು ಕನ್ನಡದ ಅಡಿಗಲ್ಲು ಸ್ಥಾಪಿಸದಿದ್ದರೆ ಆಮ್ ಆದ್ಮಿ ಪಕ್ಷ ಮುಂದೆ ನಿಂತು ಫಲಕ ಸ್ಥಾಪಿಸುತ್ತದೆ ಎಂದು ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಎಚ್ಚರಿಕೆ ನೀಡಿದರು.

Amit Shah Kannada 1

ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಒಕ್ಕೂಟ ವ್ಯವಸ್ಥೆ ಹಾಗೂ ಈ ನೆಲದ ಭಾಷೆಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಸುಮಾರು 15 ಭಾಷೆಗಳ ಅಕಾಡೆಮಿ ಸ್ಥಾಪಿಸಿದೆ ಹಾಗೂ ದೆಹಲಿ ಕನ್ನಡ ಶಾಲೆಯನ್ನು ಇತ್ತೀಚೆಗೆ ಅಭಿವೃದ್ಧಿ ಪಡಿಸಿದೆ. ಯಾವುದೇ ಸರ್ಕಾರದ ಪ್ರಮುಖ ಲಕ್ಷಣ ಭಾಷೆಗಳನ್ನು ಗೌರವಿಸುವುದು, ಆದರೆ ಬಿಜೆಪಿ ಅವಲಕ್ಷಣದ ರಾಜಕೀಯ ಮಾಡುತ್ತಿದೆ ಎಂದು ಹೇಳಿದರು.

AMITH SHA 1

ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರು ಹುಟ್ಟಿರುವ ಶಿವಮೊಗ್ಗ ಜಿಲ್ಲೆಯಲ್ಲೇ ಕನ್ನಡ ಭಾಷೆ ಬಳಸದೆ ಇರುವುದು ಅಪರಾಧ ಎಂದು ಅಭಿಪ್ರಾಯಪಟ್ಟರು. ಕನ್ನಡದ ನೆಲದಲ್ಲಿ ಹಿಂದಿ ಹೇರಿಕೆ ಮಾಡಿ ಕನ್ನಡಕ್ಕೆ ಅವಮಾನ ಎಸಗಿರುವ ಭಾರತೀಯ ಜನತಾ ಪಕ್ಷದ ಈ ಸರ್ವಾಧಿಕಾರಿ ನಡೆಯನ್ನು ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ ಎಂದರು. ಗೃಹ ಸಚಿವ ಅಮಿತ್ ಶಾ ಅವರು ಎಲ್ಲೇ ಹೋದರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರುವುದನ್ನೇ ಅಭ್ಯಾಸ ಮಾಡಿಕೊಂಡಿದ್ದಾರೆ ಎಂದ್ರು.

Share This Article
Leave a Comment

Leave a Reply

Your email address will not be published. Required fields are marked *