ಬೆಂಗಳೂರು: ಎರಡು ಬಾರಿ ಪಾಲಿಕೆ ಸದಸ್ಯರಾಗಿದ್ದ ಎಂ ನಾಗರಾಜ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಾಗರಾಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಎಂ ನಾಗರಾಜ್ 2001ರಲ್ಲಿ ಕುರುಬರಹಳ್ಳಿ ಹಾಗೂ 2010ರಲ್ಲಿ ನಂದಿಣಿ ಲೇಔಟ್ ವಾರ್ಡ್‌ನಿಂದ ಬಿಜೆಪಿ ಪಾಲಿಕೆ ಸದಸ್ಯರಾಗಿ ಆಯ್ಕೆ ಆಗಿದ್ದರು. ಇದನ್ನೂ ಓದಿ: ಕೊರೊನಾ ಸೋಂಕು- ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ
ಸದಸ್ಯರಾಗಿದ್ದ ಸಂದರ್ಭದಲ್ಲಿ ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷ ಹಾಗೂ ವಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸೇರಿದ್ದ ಅವರು 2015ರ ಚುನಾವಣೆಯಲ್ಲಿ ನಂದಿನಿ ಲೇಔಟ್‌ನಿಂದ ಸ್ಪರ್ಧಿಸಿದ್ದರು.