ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಅವರಿದೆ ಲಘು ಹೃದಯಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಬೆಳಿಗ್ಗೆ ಅನಾರೋಗ್ಯದ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಗಂಗೂಲಿ ಅವರನ್ನು ಕೋಲ್ಕತ್ತಾದ ವುಡ್‌ಲ್ಯಾಂಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿ ಆಂಜಿಯೋಪ್ಲ್ಯಾಸ್ಟಿ ಟೆಸ್ಟ್ ಮಾಡುವಂತೆ ಸೂಚಿಸಿದ್ದಾರೆ.
ಮನೆಯಲ್ಲಿನ ಜಿಮ್‍ನಲ್ಲಿ ವಕೌರ್ಟ್ ಮಾಡುತ್ತಿದ್ದಾಗ ತಲೆ ತಿರುಗಿ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ವೈದ್ಯರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು ಇಂದೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿಯಾಗಿದೆ.
ಕೋವಿಡ್ ಮಧ್ಯದಲ್ಲೇ ಗಂಗೂಲಿ ಅವರು ಕ್ರಿಕೆಟ್ ಪುನರಾರಂಭದ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ನಡೆದ ಬಿಸಿಸಿಐನ 89ನೇ ವಾರ್ಷಿಕ ಸಾಮಾನ್ಯ ಸಭೆಯ ಸಭೆಯ ನೇತೃತ್ವ ವಹಿಸಿದ್ದರು. ಅಲ್ಲದೆ 2022ರ ಐಪಿಎಲ್ ಸೀಸನ್‍ಗೆ 2 ಹೆಚ್ಚುವರಿ ಪ್ರಾಂಚೈಸಿಗಳನ್ನು ಸಹ ಘೋಷಣೆ ಮಾಡಿದ್ದಾರೆ.
ಅಕ್ಟೋಬರ್ 2019ರಲ್ಲಿ ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದು, ಆರಂಭದಲ್ಲಿ ಕೇವಲ 9 ತಿಂಗಳ ಅವಧಿಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಕೊರೊನಾ ಹಿನ್ನೆಲೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಯಿತು. ಗಂಗೂಲಿಯವರನ್ನು ದಾದಾ ಎಂದೇ ಅವರ ಅಭಿಮಾನಿಗಳು ಕರೆಯುತ್ತಾರೆ.