ಪಾಟ್ನಾ: ಅಕ್ಟೋಬರ್ 28 ರಂದು ಬಿಹಾರ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿವೆ. ಈ ಮಧ್ಯೆ ಚುನಾವಣಾ ಪೂರ್ವ ನಡೆಸಿದ ಸಮೀಕ್ಷೆ ಹೊರಬಿದ್ದಿದ್ದು ಎನ್‍ಡಿಎ ಮೈತ್ರಿಕೂಟಕ್ಕೆ ಭರ್ಜರಿ ಸಾಧಿಸಿಲಿದೆ ಎಂದು ಸಿ-ವೋಟರ್ ಸಮೀಕ್ಷೆ ಹೇಳಿದೆ
Advertisement
ಕೊರೊನಾ ಬಿಕ್ಕಟ್ಟಿನಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆಯಾಗಿದ್ದು, ಬಿಹಾರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರಲು ನಿತೀಶ್ ಕುಮಾರ್ ಹರಸಾಹಸ ಪಡುತ್ತಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಬಿಜೆಪಿ ಸಾಥ್ ನೀಡಿದೆ. ಬಿಜೆಪಿ – ಜೆಡಿಯು ಪಕ್ಷಗಳು ಸಮನಾಗಿ ಸೀಟು ಹಂಚಿಕೊಂಡು ಅಖಾಡಕ್ಕಿಳಿದಿವೆ. ಆರ್ ಜೆಡಿ, ಕಾಂಗ್ರೆಸ್, ಎಡಪಕ್ಷಗಳ ಮೈತ್ರಿ ಒಟ್ಟಾಗಿ ಹೋರಾಟಕ್ಕಿಳಿದೆ. ಇದನ್ನೂ ಓದಿ: ಬಿಹಾರ ಚುನಾವಣೆ- ಮತದಾನದಲ್ಲಿ ಹೆಣ್ಮಕ್ಳೇ ಸ್ಟ್ರಾಂಗು
Advertisement
Advertisement
ಮೊದಲ ಹಂತದ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಾಗಲೇ ಚುನಾವಣಾ ಪೂರ್ವ ನಡೆಸಿದ ಸಮೀಕ್ಷೆ ಹೊರಬಿದ್ದಿದೆ. ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಯು ಮೈತ್ರಿಕೂಟ ಸರಳ ಬಹುಮತ ಪಡೆಯಲಿದೆ ಎಂದು ಎಬಿಪಿ-ಸಿವೋಟರ್ ನಡೆಸಿದ ಸಮೀಕ್ಷೆ ತಿಳಿಸಿದೆ. 243 ವಿಧಾನಸಭಾ ಸ್ಥಾನಗಳ ಪೈಕಿ, ಆರ್‍ಜೆಡಿ, ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಮಹಾಮೈತ್ರಿ 77-98 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರದಿಂದ ದೂರ ಉಳಿಯಲಿದೆ ಎಂದು ಭವಿಷ್ಯ ನುಡಿದಿದೆ. ಎನ್ ಡಿಎ 135-159 ಸೀಟುಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಎಬಿಪಿ-ಸಿವೋಟರ್ ಸಮೀಕ್ಷೆ ಹೇಳಿದೆ. ಇದನ್ನೂ ಓದಿ: ರಾಮ ಮಂದಿರಕ್ಕಿಂತ ದೊಡ್ಡದಾದ ಸೀತಾ ಮಂದಿರ ನಿರ್ಮಿಸುತ್ತೇವೆ – ಎಲ್‌ಜೆಪಿ ಘೋಷಣೆ
Advertisement
ಎನ್‍ಡಿಎಗೆ ಶೇ.43, ಮಹಾಮೈತ್ರಿಕೂಟಕ್ಕೆ ಶೇ.35, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ ಶೇ.4 ರಷ್ಟು, ಇತರರು ಶೇ.18ರಷ್ಟು ಮತಗಳನ್ನು ಗಳಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಬಿಜೆಪಿ 73 ರಿಂದ 81 ಸ್ಥಾನಗಳನ್ನು ಪಡೆಯುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. ಜೆಡಿಯು 59 ರಿಂದ 67 ಸ್ಥಾನಗಳು ಮತ್ತು ವಿಕಾಸ್ ಶೀಲ್ ಇನ್ಸಾನ್ ಪಾರ್ಟಿ ಮೂರರಿಂದ ಏಳು ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ಆರ್ ಜೆಡಿ 56 ರಿಂದ 64 ಸ್ಥಾನಗಳು, ಕಾಂಗ್ರೆಸ್ 12 ರಿಂದ 20 ಸ್ಥಾನಗಳನ್ನು ಪಡೆಯಲಿದೆ ಎಂದು ಎಬಿಪಿ-ಸಿವೋಟರ್ ಸಮೀಕ್ಷೆ ತಿಳಿಸಿದೆ. ಇದನ್ನೂ ಓದಿ: ಗುಂಡಿಟ್ಟು ಬಿಹಾರದ ಪಕ್ಷೇತರ ಅಭ್ಯರ್ಥಿಯನ್ನು ಹತ್ಯೆಗೈದ ದುಷ್ಕರ್ಮಿಗಳು