Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೀದಿ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂ. ಸಹಾಯಧನ; ಸಾಲ ಖಾತೆಗೆ ಹೊಂದಾಣಿಕೆ ಮಾಡದಂತೆ ಬ್ಯಾಂಕುಗಳಿಗೆ ಸಿಎಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೀದಿ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂ. ಸಹಾಯಧನ; ಸಾಲ ಖಾತೆಗೆ ಹೊಂದಾಣಿಕೆ ಮಾಡದಂತೆ ಬ್ಯಾಂಕುಗಳಿಗೆ ಸಿಎಂ ಸೂಚನೆ

Bengaluru City

ಬೀದಿ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂ. ಸಹಾಯಧನ; ಸಾಲ ಖಾತೆಗೆ ಹೊಂದಾಣಿಕೆ ಮಾಡದಂತೆ ಬ್ಯಾಂಕುಗಳಿಗೆ ಸಿಎಂ ಸೂಚನೆ

Public TV
Last updated: June 8, 2021 1:36 pm
Public TV
Share
3 Min Read
Indian street food
SHARE

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನೋಂದಾಯಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ 19ರ 2ನೇ ಅಲೆಯ ಪರಿಹಾರ ಪ್ಯಾಕೇಜ್‍ನಡಿ ಘೋಷಿಸಿದ ತಲಾ ಎರಡು ಸಾವಿರ ರೂ.ಗಳ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು.

ಇದು ಕೋವಿಡ್-19 ರಿಂದ ಸಂಕಷ್ಟಕ್ಕೊಳಗಾದವರಿಗೆ ಮಾನವೀಯ ನೆಲೆಯಲ್ಲಿ ಸ್ಪಂದಿಸುವ ನಮ್ಮ ಸರ್ಕಾರದ ಒಂದು ಪ್ರಯತ್ನವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

panipuri 2

ನಗರ ಸ್ಥಳೀಯ ಸಂಸ್ಥೆಗಳಿಂದ ಸಮೀಕ್ಷೆಯ ಮೂಲಕ 2,16,439 ಬೀದಿಬದಿ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಇವರುಗಳಿಗೆ ಗುರುತಿನ ಬೀಟಿ ಮತ್ತು ಮಾರಾಟ ಪ್ರಮಾಣ ಪತ್ರವನ್ನು ವಿತರಿಸಿ, ಬೀದಿ ವ್ಯಾಪಾರ ಕೈಗೊಳ್ಳವ ಸ್ಥಳದಲ್ಲಿ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗಿದೆ. ಅಂತೆಯೇ, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಕೋವಿಡ್-19 ಮೊದಲನೇ ಅಲೆಯ ಸಂದರ್ಭದಲ್ಲಿ ಜೀವನೋಪಾಯ ನಿರ್ವಹಣೆಗೆ ಸಂಕಷ್ಟಕ್ಕೊಳಗಾದ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿ ವ್ಯಾಪಾರಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ಪ್ರತಿ ಬೀದಿಬದಿ ವ್ಯಾಪಾರಿಗಳಿಗೆ  10,000 ರೂ. ಗಳ ವರೆಗೆ ಬ್ಯಾಂಕ್ ಮೂಲಕ ಕಿರುಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಈವರೆವಿಗೂ ಯೋಜನೆಯಡಿ 107.92 ಕೋಟಿ ರೂ.ಗಳಷ್ಟು ಸಾಲವನ್ನು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದಲ್ಲಿ ಕೋವಿಡ್-19ರ 2ನೇ ಅಲೆಯ ಸಂದರ್ಭದಲ್ಲಿ ವಿಧಿಸಲಾದ ನಿರ್ಬಂಧಗಳಿಂದ ಸಂಕಷ್ಟಕ್ಕೊಳಗಾದ ಬೀದಿಬದಿ ವ್ಯಾಪಾರಿಗಳಿಗೆ ಮೇ 19 ರಂದು ಸರ್ಕಾರದಿಂದ ವಿಶೇಷ ಪ್ಯಾಕೇಜ್‍ನಡಿ ತಲಾ 2 ಸಾವಿರ ರೂ. ಆರ್ಥಿಕ ನೆರವನ್ನು ಘೋಷಿಸಲಾಗಿತ್ತು. ಅದರಂತೆ, 2,16,439 ಫಲಾನುಭವಿಗಳ ಪೈಕಿ ಆಧಾರ ಜೋಡಣೆಯಾಗಿರುವ 1,91,684 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಹಾಯಧನವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ವಿಧಾನದ ಮೂಲಕ ತಲಾ  2,000 ರೂ.ನಂತೆ ಒಟ್ಟು ಸಹಾಯಧನ 38.33 ಕೋಟಿ ರೂ.ಗಳನ್ನು ವರ್ಗಾಯಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ನುಡಿದರು.

panipuri 1

ಉಳಿದಂತೆ, ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಆಗದೇ ಇರುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯನ್ನು ಮಾಡಿ, ಸಹಾಯಧನವನ್ನು ತ್ವರಿತವಾಗಿ ಬಿಡುಗಡೆ ಮಾಡಲು ಕ್ರಮವಹಿಸಲಾಗುವುದು. ಈ ಸಹಾಯಧನ ಪಡೆದುಕೊಳ್ಳಲು ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಪ್ಯಾಕೇಜ್‍ನಡಿ ಬಿಡುಗಡೆ ಮಾಡಿರುವ ಸಹಾಯಧನವನ್ನು ಬೀದಿಬದಿ ವ್ಯಾಪಾರಿಗಳ ಯಾವುದೇ ಸಾಲಕ್ಕೆ ಸರಿದೂಗಿಸಬಾರದೆಂದು, ಈಗಾಗಲೇ ಸಂಬಂಧಿಸಿದ ಬ್ಯಾಂಕಿನವರಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆ ನಮ್ಮನ್ನು ತೀವ್ರವಾಗಿ ಬಾಧಿಸಿದೆ. ಇಂತಹ ಕಠಿಣ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ವಿವಿಧ ವಲಯಗಳ ಕಾರ್ಮಿಕರು, ರೈತರು, ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರ್ಚಕರು ಮತ್ತಿತರರಿಗೆ ಸರ್ಕಾರ 1,700 ಕೋಟಿ ರೂ. ಗಳಿಗೂ ಹೆಚ್ಚಿನ ಧನ ಸಹಾಯ ಘೋಷಿಸಿದ್ದು, ಈಗಾಗಲೇ ವಿವಿಧ ವರ್ಗದ ಕಾರ್ಮಿಕರಿಗೆ ನೇರ ನಗದು ವರ್ಗಾವಣೆ ಮೂಲಕ ಧನ ಸಹಾಯ ಮಾಡಲಾಗಿದೆ. ಇಂದು ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡಲಾಗುತ್ತಿದೆ. ಶೀಘ್ರದಲ್ಲಿಯೇ ಪ್ಯಾಕೇಜ್ ಘೋಷಣೆಯಾದ ಇತರ ವರ್ಗಗಳಿಗೂ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

Vadodara bans panipuris

ಬೀದಿ ಬದಿ ವ್ಯಾಪಾರಿಗಳು ಕೋವಿಡ್ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ, ಅವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಬೆಂಗಳೂರು ಮಹಾನಗರದಲ್ಲಿ ಈ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.

ಬೀದಿ ಬದಿ ವ್ಯಾಪಾರಿಗಳು ತಮ್ಮ ಕಾರ್ಯ ನಿರ್ವಹಣೆಯ ಸಂದರ್ಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಮತ್ತು ಸ್ವಚ್ಛತೆ ಕಾಪಾಡುವ ಮೂಲಕ ಎಲ್ಲ ಮುನ್ನೆಚ್ಚರಿಕೆಯ ಕ್ರಮ ವಹಿಸಬೇಕೆಂದು ಮನವಿ ಮಾಡಿದರು.

cm bs yediyurappa

ಸಮಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು, ಬೀದಿ ಬದಿ ವ್ಯಾಪಾರಿಗಳಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. 2.14 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಿ ತಲಾ ಎರಡು ಸಾವಿರ ರೂ. ನೆರವನ್ನು ಅರ್ಜಿ ಪಡೆಯದೇ ವಿತರಿಸಲಾಗುತ್ತಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಫಲಾನುಭವಿಗಳಾದ ನಂಜಪ್ಪ ಹಾಗೂ ಲಕ್ಷ್ಮಮ್ಮ ಅವರು ಪಿ.ಎಂ. ಸ್ವನಿಧಿ ಅಡಿ 10 ಸಾವಿರ ಸಾಲ ಸೌಲಭ್ಯ ಹಾಗೂ ಎರಡನೇ ಅಲೆ ಸಂದರ್ಭದಲ್ಲಿ ನೀಡಲಾಗುತ್ತಿರುವ 2 ಸಾವಿರ ರೂ. ನೆರವಿನಿಂದ ಅನುಕೂಲವಾಗಿದೆ ಎಂದು ತಿಳಿಸಿದರು.

vegetables 1

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಇ-ಆಡಳಿತ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಿರ್ದೇಶಕರಾದ ಎನ್. ಮಂಜುಶ್ರೀ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:CoronaCorona VirusCovid 19street vendorYediyurappa
Share This Article
Facebook Whatsapp Whatsapp Telegram

Cinema news

Adi Lakshmi Purana
ಆದಿ ಲಕ್ಷ್ಮಿ ಪುರಾಣ ಧಾರಾವಾಹಿ – ಒಡಹುಟ್ಟಿದವರ ಕಥನ
Latest Sandalwood South cinema Top Stories
Bigg Boss Rakshita Malu Dhruvanth
ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ
Cinema Latest Top Stories TV Shows
Baahubali The Epic 3
ಜಪಾನ್‌ನಲ್ಲಿ `ಬಾಹುಬಲಿ ದಿ ಎಪಿಕ್’ ರಿಲೀಸ್ – ಯಾವಾಗ ಗೊತ್ತಾ..?
Cinema Latest South cinema
Darshan
ʻದಾಸʼನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು ಎಂದ ದರ್ಶನ್‌
Bengaluru City Cinema Districts Karnataka Latest Main Post Sandalwood

You Might Also Like

Modi Putin 3
Latest

ರಷ್ಯಾ ನಾಗರಿಕರಿಗೆ 30 ದಿನಗಳ ಉಚಿತ E-ಟೂರಿಸ್ಟ್‌ ವೀಸಾ ನೀಡಲು ಭಾರತ ಅಸ್ತು

Public TV
By Public TV
6 minutes ago
narendra modi vladimir putin
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ-ರಷ್ಯಾ ಒಟ್ಟಾಗಿ ಸಾಗಲಿವೆ – ಪಹಲ್ಗಾಮ್‌ ನರಮೇಧ ಉಲ್ಲೇಖಿಸಿ ಮೋದಿ ಮಾತು

Public TV
By Public TV
47 minutes ago
MB Patil
Bengaluru City

ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ: ಅಶೋಕ್‌ ವಿರುದ್ಧ ಎಂಬಿಪಿ ಕಿಡಿ

Public TV
By Public TV
52 minutes ago
dk shivakumar 1 6
Bengaluru City

ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ: ಡಿ.ಕೆ.ಶಿವಕುಮಾರ್

Public TV
By Public TV
55 minutes ago
R V Deshpande
Bengaluru City

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಸಂಪುಟ‌ ಪುನರ್ ರಚನೆ ಸಿಎಂ ಅಧಿಕಾರ: ಆರ್.ವಿ.‌ದೇಶಪಾಂಡೆ

Public TV
By Public TV
1 hour ago
KIADB Office
Bengaluru City

KIADB ಹೊಸ ಬಹುಮಹಡಿ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?