ಬೆಂಗಳೂರು: ಬುಧವಾರ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸುವ ಸಾಧ್ಯತೆಗಳಿವೆ.
ಬುಧವಾರ ಸಂಜೆ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಇಂದು ಸಾಯಂಕಾಲ ಅಥವಾ ನಾಳೆ ಬೆಳಗ್ಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಮಾಧ್ಯಮಗಳಲ್ಲಿ ಹಲವರ ಹೆಸರು ಬರುತ್ತಿರೋದನ್ನ ಗಮನಿಸಿದ್ದೇನೆ. ನಾನೇ ಸಂಜೆ ಅವರ ಹೆಸರು ಹೇಳುತ್ತೇನೆ. ಸಂಪುಟ ವಿಸ್ತರಣೆನಾ ಅಥವ ಪುನರ್ ರಚನೆ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ ಸಿಎಂ ನಾಳೆ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು.
ಸಿಎಂ ದೆಹಲಿ ಪ್ರವಾಸದಿಂದ ಬಂದ ಬಳಿಕ ಏಳು ಸಚಿವ ಸ್ಥಾನಕ್ಕಾಗಿ ಸುಮಾರು 20ಕ್ಕೂ ಅಧಿಕ ಶಾಸಕರು ರೇಸ್ ನಲ್ಲಿದ್ದಾರೆ. ಮೂವರು ವಲಸಿಗರು ಮತ್ತು ಮೂಲ ನಾಲ್ಕು ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ನಡುವೆ ಎಂಎಲ್‍ಸಿ ಸಿ.ಪಿ.ಯೋಗೇಶ್ವರ್ ಮತ್ತು ಬಿಎಸ್‍ಪಿ ಉಚ್ಛಾಟಿತ ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಹೆಸರು ಸಂಪುಟ ಸೇರ್ಪಡೆಯಾಗುವ ಪಟ್ಟಿಯಲ್ಲಿ ಮುನ್ನಲೆಗೆ ಬಂದಿದೆ.