ಬುಮ್ರಾ, ಸಿರಾಜ್‍ಗೆ ಆಸ್ಟ್ರೇಲಿಯಾ ಅಭಿಮಾನಿಯಿಂದ ಜನಾಂಗೀಯ ನಿಂದನೆ

Public TV
1 Min Read
Bumrah

– ಐಸಿಸಿಗೆ ಬಿಸಿಸಿಐನಿಂದ ದೂರು

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯಾಟದ ಮೂರನೇ ದಿನದಾಟದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಇಬ್ಬರು ಆಟಗಾರರಿಗೆ ಪಂದ್ಯ ವಿಕ್ಷೀಸುತ್ತಿದ್ದ ಪ್ರೇಕ್ಷಕನೋರ್ವ ಹೀಯ್ಯಾಳಿಸಿದ್ದಾನೆ. ಇದನ್ನು ಖಂಡಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಅಂತಾರಾಷ್ಟ್ರೀಯಾ ಕ್ರಿಕೆಟ್ ಮಂಡಳಿಗೆ ದೂರು ನೀಡಿದೆ.

bumrah 1

ಬಿಸಿಸಿಐ ಪ್ರಕಾರ ಫೀಲ್ಡಿಂಗ್ ಮಾಡುತ್ತಿದ್ದ ಭಾರತೀಯ ಆಟಗಾರರನ್ನು ಕೆಲ ಪ್ರೇಕ್ಷಕರು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ದೂರು ದಾಖಲಿಸಿತ್ತು. ಐಸಿಸಿ ಕ್ರಿಕೆಟ್ ಆಸ್ಟ್ರೇಲಿಯಾಗೆ ಎರಡು ವಾರಗಳಲ್ಲಿ ಈ ಪ್ರಕರಣವನ್ನು ಸರಿಪಡಿಸುವಂತೆ ಸೂಚಿಸಿದೆ.

bcci

ಮದ್ಯದ ಅಮಲಿನಲ್ಲಿದ್ದ ಆಸ್ಟ್ರೇಲಿಯಾದ ಬೆಂಬಲಿಗನೊಬ್ಬ ಫೈನ್ ಲೆಗ್‍ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಬುಮ್ರಾ ಮತ್ತು ಸಿರಾಜ್ ಅವರನ್ನು ಹೀಯ್ಯಾಳಿಸಿದ್ದಾನೆ. ಇದಕ್ಕೆ ಟೀಂ ಇಂಡಿಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ದಿನದಾಟದ ಕೊನೆಯಲ್ಲಿ ಅಂಪೈರ್ ಜೊತೆ ಈ ಕುರಿತು ಮಾತಾನಾಡುತ್ತಿದ್ದಂತೆ ಬಿಸಿಸಿಐ ಮಧ್ಯ ಪ್ರವೇಶಿಸಿ ಪ್ರಕರಣವನ್ನು ಐಸಿಸಿ ಮುಂದಿಟ್ಟಿದೆ.

bumrah 2

ಮೊದಲ ಇನ್ನಿಂಗ್ಸ್‍ನಲ್ಲಿ 244 ರನ್‍ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡ ಭಾರತ ತಂಡ ಆಸೀಸ್‍ಗೆ 94 ರನ್‍ಗಳ ಮುನ್ನಡೆ ಬಿಟ್ಟುಕೊಟ್ಟಿತ್ತು. ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ದಿನದಾಟದಂತ್ಯಕ್ಕೆ ಎರಡು ವಿಕೆಟ್ ಕಳೆದುಕೊಂಡು 103 ರನ್ ಗಳಿಸಿ 197 ರನ್‍ಗಳ ಮುನ್ನಡೆ ಪಡೆದುಕೊಂಡಿದೆ. 47(69) ರನ್ ಗಳಿಸಿರುವ ಲಬುಶೇನ್ ಮತ್ತು 29(63) ಗಳಿಸಿರುವ ಸ್ಟೀವನ್ ಸ್ಮಿತ್ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *