ಬೆಂಕಿ ಜೊತೆ ಆಟ ಆಡ್ಬೇಡಿ: ದೀದಿಗೆ ರಾಜ್ಯಪಾಲರ ಸಂದೇಶ

Public TV
1 Min Read
jagdeep mamata

ಕೋಲ್ಕತ್ತಾ: ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನಗಳ ಮೇಲಿನ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಪಶ್ವಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್‍ಖಡ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಕಿ ಜೊತೆ ಆಟ ಆಡಬೇಡಿ ಎಂದು ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

J P Nadda

ಕಲ್ಲು ತೂರಾಟ ಘಟನೆ ಬಳಿಕ ಶುಕ್ರವಾರ ಮಾಧ್ಯಮಗಳ ಮಂದೆ ಜಗದೀಪ್ ಧನ್‍ಖಡ್, ರಾಜ್ಯದಲ್ಲಿಯ ಪರಿಸ್ಥಿತಿ ಚೆನ್ನಾಗಿಲ್ಲ. ಸದ್ಯದ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ನನ್ನ ವರದಿಯನ್ನ ಕಳುಹಿಸಿದ್ದೇನೆ. ಮುಖ್ಯಮಂತ್ರಿಗಳು ಬೆಂಕಿ ಜೊತೆ ಆಡದಿರುವುದು ಉತ್ತಮ ಎಂದು ಕಿಡಿ ಕಾರಿದ್ದಾರೆ.

j p nadda 1

ಯಾರು ಹೊರಗಿನವರು, ಯಾರು ಒಳಗಿನವರು ಎಂಬ ಮೊಂಡು ವಾದದಿಂದ ಮುಖ್ಯಮಂತ್ರಿಗಳು ಹಿಂದೆ ಸರಿಯಬೇಕು. ಸದ್ಯ ನಡೆದಿರುವ ಘಟನೆಗಳು ದುರದೃಷ್ಟಕರ. ಸಿಎಂ ಸಂವಿಧಾನಕ್ಕೆ ಗೌರವ ನೀಡಿ, ಅದರಂತೆ ನಡೆದುಕೊಳ್ಳಬೇಕಿದೆ. ತಮ್ಮ ಜವಾಬ್ದಾರಿಗಳಿಂದ ಸಿಎಂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಹಾಗೆ ನಡೆದ ಅಹಿತಕರ ಘಟನೆ ಬಗ್ಗೆ ರಾಜ್ಯದ ಜನತೆ ಬಳಿ ಸಿಎಂ ಕ್ಷಮೆ ಕೇಳಬೇಕೆಂದು ರಾಜ್ಯಪಾಲರು ಆಗ್ರಹಿಸಿದ್ದಾರೆ.

mamata banerjee

ಗುರುವಾರ ನಡೆದ ಕಲ್ಲು ತೂರಾಟದ ಕುರಿತು ಗೃಹಸಚಿವಾಲಯ ಡಿಜಿಪಿ ಸೇರಿದಂತೆ ಘಟನೆಯ ಮಾಹಿತಿ ಕೇಳಿ ಸಮನ್ಸ್ ನೀಡಿದೆ. ಕೋಲ್ಕತ್ತಾದಿಂದ ದಕ್ಷಿಣ 24 ಪರಗಣದ ಡೈಮಂಡ್ ಹಾರ್ಬರ್ ಗೆ ತೆರಳುವ ಮಾರ್ಗ ಮಧ್ಯೆ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು.

Share This Article
Leave a Comment

Leave a Reply

Your email address will not be published. Required fields are marked *