ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಒಂದೆಡೆ ತನ್ನ ರೌದ್ರನರ್ತನ ತೋರುತ್ತಿದ್ದರೆ, ಇನ್ನೊಂದೆಡೆ ಸಿಲಿಕಾನ್ ಸಿಟಿಯಲ್ಲಿ ಲಸಿಕೆ ವಿತರಣೆಯಲ್ಲಿಯೂ ಗೋಲ್ ಮಾಲ್ ನಡೆಯುತ್ತಿದೆ.
ಬೆಂಗಳೂರಲ್ಲಿ ಬಿಜೆಪಿ ನಾಯಕರ ಆಪ್ತರಿಗೆ ಸುಲಭದಲ್ಲಿ ಲಸಿಕೆ ಸಿಗುತ್ತಿದೆ. ಮುಂಚೂಣಿ ಕಾರ್ಯಕರ್ತರಿಗೆ ಸರ್ಕಾರ ಉಚಿತ ಲಸಿಕೆ ಘೋಷಿಸಿದೆ. ಈ ಲಸಿಕೆಯನ್ನು ಬಿಜೆಪಿ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಈ ಮೂಲಕ ಲಸಿಕೆ ವಿತರಣೆಯಲ್ಲೂ ರಾಜಕಾರಣ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
Advertisement
Advertisement
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‍ನಲ್ಲಿ ಲಸಿಕೆ ರಾಜಕಾರಣ ಬಯಲಾಗಿದೆ. ಕೊರೊನಾ ಲಸಿಕೆಯನ್ನು ಮೊದಲು ಬೀದಿಬದಿ ವ್ಯಾಪಾರಿಗಳಿಗೆ ಲಸಿಕೆ ವಿತರಿಸಬೇಕಿತ್ತು. ಆದರೆ ಬಿಜೆಪಿ ಕಾರ್ಯಕರ್ತರು ಮಾತ್ರ ಮೊದಲೇ ಟೋಕನ್ ಪಡೆದು ಲಸಿಕೆ ಪಡೆದಿದ್ದಾರೆ. ಈ ಮೂಲಕ ಲಸಿಕೆಗಾಗಿ ಕಾದಿದ್ದ ಬೀದಿಬದಿ ವ್ಯಾಪಾರಿಗಳು ಶಾಕ್ ಆಗಿದ್ದಾರೆ.
Advertisement
ಖಾಸಗಿ ಆಸ್ಪತ್ರೆಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಲಸಿಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಇದೀಗ ಬಿಜೆಪಿ ಕಾರ್ಯಕರ್ತರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಲಸಿಕೆ ವಿತರಣೆ ಮಾಡಲಾಗಿದೆ. ಗ್ಯಾಸ್ ಸಿಲಿಂಡರ್ ಪೂರೈಕೆದಾರರಿಗೆ ಮೀಸಲಾಗಿದ್ದ ಲಸಿಕೆಯನ್ನು ಬಿಜೆಪಿ ಕಾರ್ಯಕರ್ತರಿಗೆ ನೀಡಲಾಗಿದೆ ಎಂದು ಬೀದಿಬದಿ ವ್ಯಾಪಾರಿಗಳು ಆರೋಪ ಮಾಡುತ್ತಿದ್ದಾರೆ.