ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ರುದ್ರತಾಂಡವವಾಡುತ್ತಿದ್ದು, ಇದೀಗ ಕೊರೊನಾ ವಾರಿಯರ್ ಎಎಸ್‍ಐ ಒಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ.
ಹೌದು. ಬೆಂಗಳೂರು ವಿಧಾನಸೌಧದ ಭದ್ರತಾ ಎಎಸ್‍ಐ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಪೊಲೀಸರಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಎಎಸ್‍ಐ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಒಟ್ಟಿನಲ್ಲಿ ಕೊರೊನಾ ಮಹಾಮಾರಿ ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಅನೇಕ ಮಂದಿಯನ್ನು ಬಲಿ ತೆಗೆದುಕೊಂಡಿದೆ. ಬೆಡ್ ವ್ಯವಸ್ಥೆ ಸಿಗದೇ ಆಸ್ಪತ್ರೆಗೆ ಅಲೆದಾಡಿ, ಅಲೆದಾಡಿ ಕೆಲವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.