-ರಾಜ್ಯದಲ್ಲಿ 9 ಸಾವಿರದ ಗಡಿ ದಾಟಿದ ಮಹಾಮಾರಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಾಹಾಮಾರಿ ರಣಕೇಕೆ ಹಾಕುತ್ತಿದ್ದು, ಇಂದು 196 ಮಂದಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಇಂದು ಒಟ್ಟು 453 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ಸೋಂಕಿತರ ಸಂಖ್ಯೆ 9,150ಕ್ಕೇರಿಕೆಯಾಗಿದೆ. ಇಂದು ರಾಜ್ಯದಲ್ಲಿ ಐವರನ್ನು ಕೊರೊನಾ ರಾಕ್ಷಸಿ ಬಲಿ ಪಡೆದಿದ್ದಾಳೆ.
Advertisement
ಇಂದು ಬಿಡುಗಡೆಯಾದ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 196, ಬಳ್ಳಾರಿ 40, ಕಲಬುರಗಿ 39, ವಿಜಯಪುರ 39, ಮೈಸೂರು 18, ಗದಗ 18, ಧಾರವಾಡ 15, ಬಾಗಲಕೋಟೆ 14, ಬೀದರ್ 13, ದಾವಣಗೆರೆ 8, ಉತ್ತರ ಕನ್ನಡ 8, ಕೋಲಾರ 8, ದಕ್ಷಿಣ ಕನ್ನಡ 7, ಮಂಡ್ಯ 5, ಹಾಸನ 5, ತುಮಕೂರು 4, ಯಾದಗಿರಿ 3, ಚಿಕ್ಕಬಳ್ಳಾಪುರ 3, ಹಾವೇರಿ 3, ರಾಯಚೂರು 2, ಶಿವಮೊಗ್ಗ 2, ರಾಮನಗರ 2 ಮತ್ತು ಚಿಕ್ಕಮಗಳೂರಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿದೆ.
Advertisement
Advertisement
ಇಂದು ಕೊರೊನಾದಿಂದ ಗುಣಮುಖರಾಗಿ 225 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 5,618 ಗುಣಮುಖವಾಗಿದ್ದಾರೆ. 9,150 ಪ್ರಕರಣಗಳ ಪೈಕಿ 3,391 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
Advertisement
Evening Media Bulletin 21/06/2020.
Please click on the link below to view bulletin.https://t.co/IQjASekISv@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMM pic.twitter.com/s5b4D6y3uJ
— K'taka Health Dept (@DHFWKA) June 21, 2020
ಐವರು ಸಾವು:
1. ರೋಗಿ 6,553: ಬೆಂಗಳೂರಿನ 53 ವರ್ಷದ ಮಹಿಳೆ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 10ರಂದು ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಜೂನ್ 20ರಂದು ನಿಧನರಾಗಿದ್ದಾರೆ.
2. ರೋಗಿ 8,872: ಬೆಂಗಳೂರಿನ 62 ವರ್ಷದ ಪುರುಷ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 16ರಂದು ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಜೂನ್ 16ರಂದು ನಿಧನರಾಗಿದ್ದಾರೆ.
3. ರೋಗಿ 8,880: ಬೆಂಗಳೂರಿನ 55 ವರ್ಷದ ಪುರುಷ. ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಜೂನ್ 18ರಂದು ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 20ರಂದು ನಿಧನರಾಗಿದ್ದಾರೆ.
4. ರೋಗಿ 9,149: ಬೀದರ್ ಜಿಲ್ಲೆಯ 70 ವರ್ಷದ ಪುರುಷ. ಕಂಟೈನ್‍ಮೆಂಟ್ ಝೋನ್ ಸಂಪರ್ಕ ಹೊಂದಿದ್ದು ಜೂನ್ 18 ರಂದು ನಿಧನರಾಗಿದ್ದಾರೆ.
5. ರೋಗಿ 9,150: ಬೀದರ್ ನಗರದ 46 ವರ್ಷದ ಪುರುಷ. ಸೋಂಕಿನ ಮೂಲ ಪತ್ತೆಯಾಗಿಲ್ಲ. ಜೂನ್ 18ರಂದು ನಿಧನರಾಗಿದ್ದಾರೆ.