-ರಾಜ್ಯದಲ್ಲಿ 1,502 ಹೊಸ ಪ್ರಕರಣಗಳು
-ಸೋಂಕಿತರ ಸಂಖ್ಯೆ 18,016ಕ್ಕೇರಿಕೆ
ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಸ್ಫೋಟವಾಗಿದ್ದು, ಇಂದು 889 ಮಂದಿಗೆ ಸೋಂಕು ತಗುಲಿದೆ. ಇಂದು ರಾಜ್ಯದಲ್ಲಿ 1,502 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,016ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 161 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇಂದು ಸಂಜೆ ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 889, ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19, ಉತ್ತರ ಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ 4, ಕೊಪ್ಪಳ 4, ಚಿತ್ರದುರ್ಗ 3, ಗದಗ 2, ಚಿಕ್ಕಬಳ್ಳಾಪುರ 1 ಮತ್ತು ಚಿಕ್ಕಮಗಳೂರಿನಲ್ಲಿ ಒಂದು ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ.
ಒಟ್ಟು 18,016ರಲ್ಲಿ 9,406 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ಒಟ್ಟು 271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಬೆಂಗಳೂರು ಕೊರೊನಾ ಸಾವಿನ ಸಂಖ್ಯೆಯಲ್ಲಿ ಶತಕ ದಾಖಲಿಸಿದೆ. ಇಂದು ಒಟ್ಟು 19 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.