ಬೆಂಗಳೂರು: ಕೋವಿಡ್ ಸೋಂಕಿತರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೀಸಲಾಗಿಟ್ಟಿರುವ ಒಟ್ಟು 3,331 ಬೆಡ್‌ಗಳ ಪೈಕಿ 733 ಹಾಸಿಗೆಗಳು ಭರ್ತಿಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು ಬೆಂಗಳೂರು ನಗರದಾದ್ಯಂತ ಇರುವ ಒಟ್ಟು 72 ಖಾಸಗಿ ಆಸ್ಪತ್ರೆಗಳಲ್ಲಿ 3,331 ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಶನಿವಾರ ಸಂಜೆಯ ವೇಳೆಗೆ ಇವುಗಳಲ್ಲಿ 733 ಹಾಸಿಗೆಗಳು ಭರ್ತಿಯಾಗಿದ್ದು 2,598 ಹಾಸಿಗೆಗಳು ಅಂದರೆ ಸುಮಾರು ಶೇ.78 ಹಾಸಿಗೆಗಳು ಖಾಲಿಯಿವೆ ಎಂದು ತಿಳಿಸಿದ್ದಾರೆ.
ಬೆಂಗಳೂರು ನಗರದಾದ್ಯಂತ ಇರುವ ಒಟ್ಟು 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಶನಿವಾರ ಸಂಜೆಯ ವೇಳೆಗೆ ಇವುಗಳಲ್ಲಿ 733 ಹಾಸಿಗೆಗಳು ಭರ್ತಿಯಾಗಿದ್ದು 2598 ಹಾಸಿಗೆಗಳು ಅಂದರೆ ಸುಮಾರು ಶೇ.78% ಹಾಸಿಗೆಗಳು ಖಾಲಿಯಿವೆ@BSYBJP pic.twitter.com/xVzAXcpHlr
— Dr Sudhakar K (@mla_sudhakar) July 5, 2020
ಶನಿವಾರ ಟ್ವೀಟ್ ಮಾಡಿದ್ದ ಅವರು, ಸರ್ಕಾರಿ ಮತ್ತು ಖಾಸಗಿ ಮೆಡಿಕಲ್ ಕಾಲೇಜುಗಳು, ಆಸ್ಪತ್ರೆಗಳು, ಕೋವಿಡ್ ಕೇರ್ ಸೆಂಟರ್ ಗಳು ಸೇರಿದಂತೆ ಬೆಂಗಳೂರಿನ ಒಟ್ಟು 41 ಸ್ಥಳಗಳಲ್ಲಿ 4,958 ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಇವುಗಳಲ್ಲಿ 2107 ಹಾಸಿಗೆಗಳು ಅಂದರೆ ಸುಮಾರು ಶೇ.42.49 ಹಾಸಿಗೆಗಳು ಖಾಲಿಯಿವೆ ಎಂದು ತಿಳಿಸಿದ್ದರು.
ಸರ್ಕಾರಿ ಮತ್ತು ಖಾಸಗಿ ಮೆಡಿಕಲ್ ಕಾಲೇಜುಗಳು, ಆಸ್ಪತ್ರೆಗಳು, ಕೋವಿಡ್ ಕೇರ್ ಸೆಂಟರ್ ಗಳು ಸೇರಿದಂತೆ ಬೆಂಗಳೂರಿನ ಒಟ್ಟು 41 ಸ್ಥಳಗಳಲ್ಲಿ 4958 ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಇವುಗಳಲ್ಲಿ 2107 ಹಾಸಿಗೆಗಳು ಅಂದರೆ ಸುಮಾರು ಶೇ.42.49% ಹಾಸಿಗೆಗಳು ಖಾಲಿಯಿವೆ.@BSYBJP pic.twitter.com/ZATbQBm6b1
— Dr Sudhakar K (@mla_sudhakar) July 4, 2020
ಒಟ್ಟು ಬೆಂಗಳೂರಿನಲ್ಲಿ 8,345 ಮಂದಿಗೆ ಸೋಂಕು ಬಂದಿದ್ದು, ಈ ಪೈಕಿ 7,250 ಸಕ್ರಿಯ ಪ್ರಕರಣಗಳಿವೆ. 965 ಮಂದಿ ಬಿಡುಗಡೆಯಾಗಿದ್ದು, 129 ಮಂದಿ ಮೃತಪಟ್ಟಿದ್ದಾರೆ. ಶನಿವಾರ ಒಂದೇ ದಿನ ಬೆಂಗಳೂರಿನಲ್ಲಿ 1172 ಮಂದಿಗೆ ಸೋಂಕು ಬಂದಿದೆ.