ಬೆಂಗಳೂರು: ನಾಳಿನ ಟ್ರ್ಯಾಕ್ಟರ್ ರ‍್ಯಾಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.
ವಿವಿಧ ರೈತ ಸಂಘಟನೆಗಳು ಕೇಂದ್ರದ ಕೃಷಿ ಕಾಯ್ದೆಯನ್ನು ವಿರೋಧಿ ನಗರದಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ಕರೆ ನೀಡಿದ್ದರು. ಈ ಸಂಬಂಧ ಇಂದು ಸಭೆ ನಡೆಸಿದ ಕಮಲ್ ಪಂಥ್ ನಾಳಿನ ಟ್ರ್ಯಾಕ್ಟರ್ ರ‍್ಯಾಲಿಗೆ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ನಾಳೆ ಗಣರಾಜ್ಯೋತ್ಸವಕ್ಕೆ ಪರಿಸ್ಥಿತಿ ನೋಡಿಕೊಂಡು ಬಂದೋಬಸ್ತ್ ಮಾಡಲಾಗುತ್ತದೆ. ಇಂದು ಸಂಜೆಯಿಂದಲೇ ಬಂದೋಬಸ್ತ್ ವ್ಯವಸ್ಥೆ ಆಗಲಿದೆ. ನಗರದಲ್ಲಿ ಶಾಂತಿಯುತ ಪ್ರತಿಭಟನೆಗೆ ಮಾತ್ರ ಅವಕಾಶ. ಟ್ರ್ಯಾಕ್ಟರ್ ಮೂಲಕ ಪ್ರತಿಭಟನೆಗೆ ಬಂದರೆ ಅವರನ್ನು ನಗರದ ಒಳಗೆ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಸಾಂಕೇತಿಕವಾಗಿಯೂ ಟ್ರ್ಯಾಕ್ಟರ್‌ನಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ. ಹಿಂದೆ ಎಂದೂ ಟ್ರ್ಯಾಕ್ಟರ್ ಮೂಲಕ ನಗರದಲ್ಲಿ ಪ್ರತಿಭಟನೆ ಆಗಿಲ್ಲ. ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಕೆಲವರು ಅರ್ಜಿ ನೀಡಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.