ಬೆಂಗಳೂರು: ಮಹಾಮಾರಿ ಕೊರೋನಾ ಸಂದರ್ಭದಲ್ಲೂ ಮಧ್ಯರಾತ್ರಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸಿಲಿಕಾಲ್ ಸಿಟಿಯಲ್ಲಿ ನಡೆದಿದೆ.
ಮಣಿ (27) ಕೊಲೆಯಾದ ಯುವಕ. ಬಿಟಿಎಂ ಲೇಔಟ್ 2ನೇ ಹಂತದ ಎನ್.ಎಸ್.ಪಾಳ್ಯದಲ್ಲಿ ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಮೃತ ಯುವಕ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದನು.
ರೌಡಿಶೀಟರ್ ಸಂತೋಷ್ ಮತ್ತು ಆತನ ತಂಡ ಮಣಿ ಮನೆಯ ಬಳಿ ಬಂದು ಮಾರಕಾಸ್ತ್ರದಿಂದ ಕೊಲೆ ಮಾಡಿದ ಪರಾರಿಯಾಗಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಮಣಿಯನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಮೈಕೋ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.