ಬೆಂಗಳೂರು: ಸಿಲಿಕಾನ್ ಸಿಟಿಯ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿಯಿತು.
Advertisement
ನಗರದ ಯಶವಂತಪುರ, ಶಾಂತಿನಗರ, ರಾಜಾಜಿನಗರ, ಮೆಜೆಸ್ಟಿಕ್, ಬನಶಂಕರಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು ಕಂಗಾಲಾಗಿದ್ದು, ಫುಲ್ ಟ್ರಾಫಿಕ್ ಜಾಮ್ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು. ಅಲ್ಲದೆ ಅಂಡರ್ ಪಾಸ್‍ಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು.
Advertisement
Advertisement
ದೀಢೀರ್ ಸುರಿದ ಮಳೆಯಿಂದಾಗಿ ದ್ವಿಚಕ್ರ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು. ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಸಂಪೂರ್ಣ ಟ್ರಾಫಿಕ್ ಜಾಮ್ ಸಂಭವಿಸಿದ್ದು, ಕೆಲಸ ಮುಗಿಸಿ ಮನೆಗೆ ತೆರಳುವವವರು ಕೆಲವರು ಮಳೆಯಲ್ಲೇ ನೆನೆದರೆ, ಇನ್ನೂ ಅಂಗಡಿ ಮುಂಗಟ್ಟುಗಳ ಬಳಿ ಹಲವರು ಆಶ್ರಯ ಪಡೆದರು.
Advertisement
ಆನೇಕಲ್ ತಾಲೂಕಿನಾದ್ಯಂತ ಸಹ ಮಳೆಯಾಗಿದ್ದು, ಆನೇಕಲ್ ಅತ್ತಿಬೆಲೆ ಎಲೆಕ್ಟ್ರಾನ್ ಸಿಟಿ ಬನ್ನೇರುಘಟ್ಟ ಭಾಗದಲ್ಲಿ ಮಳೆಯಾಗಿದೆ. ಮಳೆಯಿಂದಾಗಿ ಫುಲ್ ಟ್ರಾಫಿಕ್ ಜಾಮ್ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರು ಅಂಗಡಿ-ಮುಂಗಟ್ಟು ಮತ್ತು ಬಸ್ ನಿಲ್ದಾಣದ ಬಳಿ ಆಶ್ರಯ ಪಡೆದರು.