ಬೆಂಗಳೂರು: ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಜೊತೆಗೆ ಚುರುಕು ಮುಟ್ಟಿಸುವ ಕೆಲಸಕ್ಕೆ ಚಾಲನೆ ಸಿಕ್ಕಿದೆ.
ಒಂದು ಕಡೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಅಪರಾಧ ಚಟುವಟಿಕೆಗಳು, ಮತ್ತೊಂದು ಕಡೆ ಜನ ಸಾಮಾನ್ಯರಿಗೆ ನ್ಯಾಯ ಕೊಡಿಸಬೇಕಾದ ಪೊಲೀಸರೇ ಅಕ್ರಮ ಚಟುವಟಿಕೆಗಳಿಗೆ ಸಾಥ್ ನೀಡಿ ಲಂಚ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗ್ತಿವೆ. ಕೆಲ ಪೊಲೀಸ್ ಠಾಣೆಗಳಲ್ಲಿ ಎಂಟತ್ತು ವರ್ಷಗಳಿಂದ ಯಾವುದೇ ವರ್ಗಾವಣೆ ಇಲ್ಲದೇ ಒಂದೇ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ರಾಜಕೀಯ ಮುಖಂಡರು, ಕೆಲ ಹಿರಿಯ ಅಧಿಕಾರಿಗಳ ಕೃಪಾಕಟಾಕ್ಷದಿಂದ ಎಂಟತ್ತು ವರ್ಷಗಳಿಂದ ಒಂದೇ ಕಡೆ ಕೆಲಸ ಮಾಡ್ತಿದ್ದ ಪೊಲೀಸರಿಗೆ ಇಲಾಖೆ ಶಾಕ್ ಕೊಟ್ಟಿದೆ.
Advertisement
Advertisement
ಮೊಲದ ಭಾಗವಾಗಿ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ ಬರೋಬ್ಬರಿ 999 ಹೆಡ್ ಕಾನ್‌ಸ್ಟೇಬಲ್ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿರುವ ನಿಶಾ ಜೇಮ್ಸ್ ವರ್ಗಾವಣೆಗೊಳಿಸಿ ಆದೇಶ ನೀಡಿದ್ದಾರೆ. ನಗರದ ಸಾಕಷ್ಟು ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಅಪರಾಧ ಹಿನ್ನೆಲೆ ಇರುವ ವ್ಯಕ್ತಿಗಳ ಬಗ್ಗೆ ಗೊತ್ತಿದ್ರು ಕೂಡ, ಆಮಿಷಗಳಿಗೆ ಒಳಗಾಗಿ ನೋಡಿ ನೋಡದಂತೆ ಸಿಬ್ಬಂದಿ ವರ್ತಿಸಿರೋದು, ಅಪರಾಧ ಚಟುವಟಿಕೆಗಳನ್ನು ತಡೆಯದೇ ಇರೋದರ ಬಗ್ಗೆ ಕೆಲ ದಿನಗಳ ಹಿಂದೆ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಗಮನಹರಿಸಿದ್ದರು. ಇದನ್ನೂ ಓದಿ: ಮನೆಯಲ್ಲಿ ಮಾಡಿ ಗೋಧಿ ಹಿಟ್ಟಿನ ದೋಸೆ
Advertisement
Advertisement
ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಗಳು ಮಾತ್ರವಲ್ಲದೇ ಕ್ರೈಂ ಸಿಬ್ಬಂದಿ, ಸಬ್ ಇನ್ಸ್ ಪೆಕ್ಟರ್ ಗಳು ಕೂಡ ಕೆಲ ವರ್ಷಗಳಿಂದ ಗ್ರಾಮೀಣ ಭಾಗಕ್ಕೆ ಹೋಗದೇ, ನಗರದಲ್ಲೇ ಕೆಲಸ ಮಾಡುತ್ತಿರುವ ಬಗ್ಗೆ ಕೂಡ ಮಾಹಿತಿ ಕಲೆಹಾಕಿದ್ದಾರೆ. ಹಂತ ಹಂತವಾಗಿ ಪೊಲೀಸ್ ಇಲಾಖೆಯ ಎಲ್ಲಾ ವರ್ಗಗಳಿಗೂ ವರ್ಗಾವಣೆ ಸೇರಿದಂತೆ ಕೆಲ ನಿಯಮಗಳನ್ನು ಜಾರಿಗೆ ತರಲು ಇಲಾಖೆಯ ಹಿರಿಯ ಅಧಿಕಾರಿಗಳು ಚಿಂತಿಸಿದ್ದಾರೆ. ಅದರ ಮೊದಲ ಭಾಗವಾಗಿ ಹೆಡ್ ಕಾನ್‌ಸ್ಟೇಬಲ್ ಗಳ ವರ್ಗಾವಣೆಗೊಳಿಸಲಾಗಿದೆ ಎನ್ನಲಾಗಿದೆ.