ಬೆಂಗಳೂರು: ಇಂದು ರಾತ್ರಿ 8 ಗಂಟೆಯ ಬಳಿಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ಕೂಡ ಜನ ಬೆಂಗಳೂರು ತೊರೆಯುತ್ತಿದ್ದಾರೆ.
ಕುಟುಂಬ ಸಮೇತ ಗಂಟು ಮೂಟೆ ಕಟ್ಟಿಕೊಂಡು ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಇವತ್ತು ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಮೆಜೆಸ್ಟಿಕ್‍ನಿಂದ ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಒಂದು ವಾರ ಲಾಕ್‍ಡೌನ್ ಇದೆ. ಹೀಗಾಗಿ ಊರಲ್ಲಿ ಇದ್ದು ಬರೋಣ ಎಂದು ಅನೇಕರು ಬೆಂಗಳೂರಿನಿಂದ ಹೋಗುತ್ತಿದ್ದಾರೆ.
Advertisement
Advertisement
ಬಸ್ ನಿಲ್ದಾಣದಲ್ಲಿ ಲಗೇಜ್ ಸಮೇತ ಊರಿಗೆ ತೆರಳಲು ನಿಂತಿದ್ದಾರೆ. ನಿನ್ನೆ ಬಸ್ ಇಲ್ಲದೆ ಪ್ರಯಾಣಿಕರು ಪರದಾಡಿದ್ದರು. ಹೀಗಾಗಿ ಪ್ರತಿ ಬಸ್ ಸ್ಟಾಂಡ್‍ಗಳಲ್ಲಿ ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ. ಗೊರಗೊಂಟೆಪಾಳ್ಯ, ಜಾಲಹಳ್ಳಿ ಕ್ರಾಸ್ ಬಸ್ ನಿಲ್ದಾಣಗಲ್ಲಿ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಇಂದು ಕೂಡ ಊರಿಗಳಿಗೆ ತೆರಳಲು ಜನರು ನಿಂತಿದ್ದಾರೆ.
Advertisement
ಜಾಲಹಳ್ಳಿ ಕ್ರಾಸ್ ಬಸ್ ನಿಲ್ದಾಣದಲ್ಲಿ ಪ್ರತಿ ಪ್ರಯಾಣಿಕರಿಗೂ ಆರೋಗ್ಯ ಸಿಬ್ಬಂದಿ ಥರ್ಮಲ್ ಸ್ಕ್ಯಾನಿಂಗ್ ಮಾಡಿ ಕಳುಹಿಸುತ್ತಿದ್ದಾರೆ. ಹೆಚ್ಚುವರಿ ಬಸ್‍ಗಳ ನಿಯೋಜನೆ ಹಿನ್ನೆಲೆ ಬಸ್ ನಿಲ್ದಾಣದಲ್ಲಿ ಜನಸಂದಣಿ ಕಡಿಮೆಯಾಗಿದೆ.
Advertisement
ಮುಂಜಾನೆಯಿಂದಲೇ ನೆಲಮಂಗಲ ರಸ್ತೆಯ ನವಯುಗ ಟೋಲ್‍ನಲ್ಲಿ ವಾಹನ ದಟ್ಟಣೆ ಶುರುವಾಗಿದೆ. ರಾತ್ರಿಯಿಂದ ನವಯುಗ ಟೋಲ್ ಹಣ ಸಂಗ್ರಹ ಮಾಡುತ್ತಿಲ್ಲ. ಲಾಕ್‍ಡೌನ್ ಹಿನ್ನೆಲೆ ವಾಹನ ಸವಾರರಿಂದ ಯಾವುದೇ ಸುಂಕ ಕಲೆಕ್ಟ್ ಮಾಡುತ್ತಿಲ್ಲ. ಇಂದು ರಾತ್ರಿ 8 ಗಂಟೆಯವರೆಗೆ ಹಣ ಸಂಗ್ರಹ ಮಾಡದಿರಲು ಆದೇಶ ಬಂದಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ. ಹೀಗಾಗಿ ನಿರಂತರವಾಗಿ ವಾಹನಗಳ ಓಡಾಡುತ್ತಿವೆ. ಇಂದು ಸಹ ಸ್ವಂತ ವಾಹನಗಳಲ್ಲಿ ಜನರು ಊರು ಬಿಟ್ಟು ಹೋಗುತ್ತಿದ್ದಾರೆ. ಲಗೇಜ್ ಆಟೋ, ಬೈಕ್, ಕಾರ್‌ಗಳ ಮೂಲಕ ಊರಿಗೆ ಹೋಗುತ್ತಿದ್ದಾರೆ.