ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಡುವೆ ಮಳೆ ಕೂಡ ಕಾಣಿಸಿಕೊಂಡಿದೆ. ಇಂದು ಬೆಂಗಳೂರಿನ ಹಲವು ಭಾಗಗಳಲ್ಲಿ ವರುಣ ತಂಪೆರಗಿದ್ದಾನೆ.
ಬೆಂಗಳೂರಿನ ಕೆ.ಆರ್ ಸರ್ಕಲ್, ವಿಧಾನಸೌಧ, ಕಾಟನ್ ಪೇಟೆ ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಮಲ್ಲೇಶ್ವರಂ ಸೇರಿದಂತೆ ಹಲವಡೆ ಭರ್ಜರಿ ಮಳೆ ಸುರಿದಿದೆ. ಇನ್ನೆರಡುದಿನ ಬೆಂಗಳೂರಿನಲ್ಲಿ ಮಳೆ ಬರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಗರದಲ್ಲಿ ತಂಪಿನ ವಾತಾವರಣವಿದ್ದು ಮೇ 22 ಮತ್ತು 23ರಂದು ಮಳೆ ಬರುವ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಅದೇ ರೀತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಳೆ ಕೂಡ ಮಳೆ ಬರುವ ನಿರೀಕ್ಷೆ ಇದ್ದು, ಕರಾವಳಿ ಭಾಗಗಳಾದ ಮಂಗಳೂರು, ಉಡುಪಿ ಸೇರಿದಂತೆ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ರಾಮನಗರದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.