ಬೆಂಗಳೂರು: ಜಿಲ್ಲಾ ಉಸ್ತುವಾರಿ ಕೊಡೋದು ಸಿಎಂ ಪರಮಾಧಿಕಾರ. ನಾನು ಇದೇ ಜಿಲ್ಲಾ ಉಸ್ತುವಾರಿ ಬೇಕು ಅಂತ ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಕೇಳಿಲ್ಲ. ಸಿಎಂ ನಿರ್ಧಾರಕ್ಕೆ ನಾನು ಬದ್ಧ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸಚಿವ ವಿ.ಸೋಮಣ್ಣ ಹೇಳಿಕೆಗೆ ವೀಡಿಯೋ ಸಂದೇಶ ಮೂಲಕ ಪ್ರತಿಕ್ರಿಯೆ ನೀಡಿದ ಸಚಿವ ಅಶೋಕ್, ಹಿರಿಯ ಸಚಿವ ವಿ ಸೋಮಣ್ಣ ಅವರ ಹೇಳಿಕೆ ಮಾಧ್ಯಮಗಳಲ್ಲಿ ನೋಡಿದೆ. ಬೆಂಗಳೂರು ನಗರ ಉಸ್ತುವಾರಿ ಸೇರಿದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ನೇಮಕ ಮಾಡುವುದು ಸಿಎಂ ಬಸವರಾಜ ಬೊಮ್ಮಾಯಿ ಅವರ ವಿವೇಚನೆಗೆ ಬಿಟ್ಟಿದ್ದು. ಈ ಬಗ್ಗೆ ನಾನು ಯಾವುದೇ ಕಾಮೆಂಟ್ ಮಾಡಲ್ಲ ಎಂದರು. ಇದನ್ನೂ ಓದಿ: ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ
Advertisement
ಈ ತನಕ ನಾನು ಇದೇ ಜಿಲ್ಲೆಯ ಉಸ್ತುವಾರಿ ಬೇಕೆಂದು, ಸಿಎಂ ಸೇರಿದಂತೆ ಯಾರ ಹತ್ತಿರವೂ ನಾನು ಕೇಳಿಲ್ಲ. ಹಿಂದೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಕೊಟ್ಟಿದ್ರು, ಕೆಲಸ ಮಾಡಿದ್ದೀನಿ. ನಂತರ ಸಚಿವ ಎಂಟಿಬಿ ನಾಗರಾಜ್ ನನಗೆ ಬೇಕು ಅಂತಾ ಕೇಳಿದ್ರು, ಗ್ರಾಮಾಂತರ ಉಸ್ತುವಾರಿಯನ್ನು ಎಂಟಿಬಿ ಅವರಿಗೆ ಬಿಟ್ಟುಕೊಟ್ಟೆ. ಉಸ್ತುವಾರಿ ಮಂತ್ರಿ ಆಗದೆಯೂ ನಾನು ಕೆಲಸ ಮಾಡಿದ್ದೀನಿ ಎಂದರು.
Advertisement
ನನ್ನ ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದ ಕಾರಣ ಸಚಿವರು, ಶಾಸಕರು ಕರೆದಿದ್ದ ಸಭೆಗೆ ಭಾಗವಹಿಸಲು ಆಗಲಿಲ್ಲ. ಬೆಂಗಳೂರು ನಗರ ಉಸ್ತುವಾರಿ ಯಾರಿಗೆ ಕೊಟ್ರೂ ಅವರ ಜೊತೆಗೆ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದರು.