ಬೆಂಗಳೂರು: ನಿವೃತ್ತ ಪ್ರೊಫೆಸರೊಬ್ಬರು ನೇಣಿಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಮೈಕೋ ಲೇಔಟ್ ನಲ್ಲಿ ನಡೆದಿದೆ.
ಅಶೋಕ್ ಕುಮಾರ್ ನೇಣಿಗೆ ಶರಣಾದ ರಿಟೈರ್ಡ್ ಪ್ರೊಫೆಸರ್. ಮೈಕೋ ಲೇಔಟ್ ನ ಕೆಎಎಸ್ ಕಾಲೋನಿಯಲ್ಲಿ ವಾಸವಾಗಿದ್ದ ಇವರು ಬೆಂಗಳೂರು ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡಿದ್ದರು. ಇಂದು ಮೈಕೋಲೇಔಟ್ ಠಾಣಾ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಮೂಲತಃ ಶಿವಮೊಗ್ಗದವರಾಗಿರುವ ಅಶೋಕ್, ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ನಂತರ ಬೆಂಗಳೂರಿನ ಯ್ಯೂನಿರ್ವಸಿಟಿಯಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಅಶೋಕ್, ರಾತ್ರಿ ಹನ್ನೆರಡು ಗಂಟೆವರೆಗೂ ಪತ್ನಿ ಜೊತೆಗೆ ಮಾತಾಡುತ್ತಿದ್ದರು. ಆದರೆ ಬೆಳಗ್ಗಿನ ಜಾವ 7 ಗಂಟೆ ಸುಮಾರಿಗೆ ರೂಮ್ ಬಾಗಿಲು ತೆರೆದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ.
ಮೈಕೋಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಅಶೋಕ್. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಂಜೆ ವೇಳೆ ಬೆಂಗಳೂರಿನಲ್ಲೇ ಅಂತ್ಯಕ್ರಿಯೆ ಮಾಡಲು ತಿರ್ಮಾನ ಮಾಡಲಾಗಿದೆ.
ಅಶೋಕ್ ಅವರಿಗೆ ಅನಾರೋಗ್ಯ, ಹಣಕಾಸಿನ ಯಾವುದೇ ಸಮಸ್ಯೆ ಇರಲಿಲ್ಲ. ಹೀಗಾಗಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಈ ಸಂಬಂಧ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಗಿದೆ.