ಬೆಂಗಳೂರು: ಪ್ರತಿದಿನ ತನ್ನ ರೆಕಾರ್ಡ್ ಗಳನ್ನು ಮುರಿಯುತ್ತಾ ಬರುತ್ತಿರೊ ಮಹಾಮಾರಿ ಕೊರೊನಾ ವೈರಸ್ ಇಂದು ಸಹ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ. ಇಂದು ಒಟ್ಟು ರಾಜ್ಯದಲ್ಲಿ 2,798 ಜನಕ್ಕೆ ಕೊರೊನಾ ಸೋಂಕು ತಗುಲಿರೋದು ಖಚಿತವಾಗಿದೆ. ಇತ್ತ ಮಹಾನಗರಿ ಬೆಂಗಳೂರಿನಲ್ಲಿ ಕೊರೊನಾದ ರೌದ್ರ ನರ್ತನ ಮುಂದುವರಿದಿದ್ದು ಒಂದೇ ದಿನ 1,533 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು 1,533, ದಕ್ಷಿಣ ಕನ್ನಡ 186, ಉಡುಪಿ 90, ಮೈಸೂರು 83, ತುಮಕೂರು 78, ಧಾರವಾಡ 77, ಯಾದಗಿರಿ 74, ದಾವಣಗೆರೆ 72, ಕಲಬುರಗಿ 65, ಬಳ್ಳಾರಿ 65, ಬೀದರ್ 63, ವಿಜಯಪುರ 48, ಉತ್ತರ ಕನ್ನಡ 40, ಗದಗ 40, ಬಾಗಲಕೋಟೆ 37, ಹಾಸನ 34, ರಾಮನಗರ 30, ಶಿವಮೊಗ್ಗ 26, ಮಂಡ್ಯ 23, ಕೊಪ್ಪಳ 23, ಚಿಕ್ಕಬಳ್ಳಾಪುರ 20, ಚಾಮರಾಜನಗರ 17, ಹಾವೇರಿ 16, ರಾಯಚೂರು 14, ಕೋಲಾರ 12, ಕೊಡಗು 12, ಚಿತ್ರದುರ್ಗ 9, ಬೆಂಗಳೂರು ಗ್ರಾಮಾಂತರ 5, ಬೆಳಗಾವಿ 3 ಮತ್ತು ಚಿಕ್ಕಮಗಳೂರಿನಲ್ಲಿ 3 ಪ್ರಕರಣಗಳು ಬೆಳಕಿಗೆ ಬಂದಿವೆ.
ಇಂದು 880 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 504 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಒಟ್ಟು 70 ಜನರು ಕೊರೊನಾಗೆ ಬಲಿಯಾಗಿದ್ದು, ಇದುವರೆಗೂ 613 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು 36,216 ಪ್ರಕರಣಗಳಲ್ಲಿ 20,883 ಸಕ್ರಿಯ ಕೇಸ್ ಗಳಿವೆ.