ಬೆಂಗ್ಳೂರಲ್ಲಿ ಕೊರೊನಾಗೆ ಎಎಸ್‍ಐ ಬಲಿ

Public TV
1 Min Read
coronavirusnew 1

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಕೊರೊನಾ ತನ್ನ ಮರಣ ಕೇಕೆಯನ್ನು ಮುಂದುವರಿಸಿದ್ದು, ನಗರದಲ್ಲಿ ಮತ್ತೊಬ್ಬ ಕೊರೊನಾ ವಾರಿಯರ್ ಸಾವನ್ನಪ್ಪಿದ್ದಾರೆ.

ಎಎಸ್‍ಐ ಆಗಿ ಕರ್ತವ್ಯ ನಿರ್ವಹಿಸುತಿದ್ದ ವಾರಿಯರ್ ಮಹಾಮಾರಿ ಕೊರೊನಾಗೆ ಮೃತಪಟ್ಟಿದ್ದಾರೆ. ಮೃತ ಎಎಸ್‍ಐ ಬೆಂಗಳೂರಿನ ಸಿಟಿ ಆರ್ಮ್ ರಿಸರ್ವ್ ಸೌತ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಕೊರೊನಾ ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

CORONA VIRUS 1

ಕಳೆದ 24 ಗಂಟೆಯಲ್ಲಿ ನಗರದಲ್ಲಿ 33 ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದೆ. ಇದುವರೆಗೂ ಕೊರೊನಾ ಸೋಂಕಿನಿಂದ 9 ಮಂದಿ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಸೋಮವಾರ 3,648 ಮಂದಿಗೆ ಸೋಂಕು ತಗುಲಿದ್ದು, 72 ಮಂದಿ ಮೃತಪಟ್ಟಿದ್ದಾರೆ. ಈ ವರೆಗೆ ಸಾವನ್ನಪ್ಪಿರುವವರ ಸಂಖ್ಯೆ 1,403ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈ ವರೆಗೆ 67,420 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 580 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

coronavirus 4833754 1920

ಬೆಂಗಳೂರಿನಲ್ಲಿ ಸೋಮವಾರ 1,452 ಜನರಿಗೆ ಸೋಂಕು ತಗುಲಿದ್ದು, ಒಟ್ಟು 33,229 ಪ್ರಕರಣಗಳು ಪತ್ತೆಯಾದಂತಾಗಿದೆ. ಇದರಲ್ಲಿ ಇನ್ನೂ 25,574 ಸಕ್ರಿಯ ಪ್ರಕರಣಗಳಿವೆ. ನಿನ್ನೆ 31 ಜನ ಸಿಲಿಕಾನ್ ಸಿಟಿಯಲ್ಲಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದು, ಈ ವರೆಗೆ 698 ಜನ ಸಾವನ್ನಪ್ಪಿದಂತಾಗಿದೆ.

Share This Article
Leave a Comment

Leave a Reply

Your email address will not be published. Required fields are marked *