ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್‍ನಿಂದ ಸಾಯುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಕೂಡ ಮಹಾಮಾರಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ.
ಕೊರೊನಾ ಲಕ್ಷಣ ಕಂಡು ಬಂದ ನಂತರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. 39 ವರ್ಷದ ವ್ಯಕ್ತಿ, 65 ವರ್ಷದ ವೃದ್ಧ ಮತ್ತು 85 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿಗರೇ ಎಚ್ಚರ, 6 ದಿನಕ್ಕೆ19 ಮಂದಿ ಬಲಿ
85 ವರ್ಷದ ವೃದ್ಧೆ ಶನಿವಾರ ರಾತ್ರಿ ಜಯನಗರ ಜನರಲ್ ಆಸ್ಪತ್ರೆಯಿಂದ ಶಿಫ್ಟ್ ಆಗಿದ್ದರು. 65 ವರ್ಷದ ವೃದ್ಧ ಇಎಸ್‍ಐ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದರು. ಇನ್ನೂ ಸೆಂಟ್ ಜಾನ್ ಆಸ್ಪತ್ರೆಯಿಂದ 39 ವರ್ಷದ ವ್ಯಕ್ತಿ ಶಿಫ್ಟ್ ಆಗಿದ್ದರು. ಮೂವರು ನಾನಾ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಬ್ಬರು ಮೃತಪಟ್ಟ ಬಳಿಕ ಕೋವಿಡ್ ಪರೀಕ್ಷೆ ಮಾಡಿದಾಗ ಪಾಸಿಟಿವ್ ಬಂದಿದೆ.
ವೃದ್ಧೆ ಮತ್ತು ವೃದ್ಧ ಜ್ವರ, ಕೆಮ್ಮು, ಬಿಪಿ, ಶುಗರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳುತ್ತಿದ್ದರು. ವಯಸ್ಸಾದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಇವರಿಗೆ ಹೇಗೋ ಕೊರೊನಾ ವೈರಸ್ ತಗುಲಿ ಮತ್ತಷ್ಟು ಸಮಸ್ಯೆ ತಂದು ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡಿದೆ. ಇದರಿಂದ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ಸಾವಿನ ಸಂಖ್ಯೆ 32ಕ್ಕೆ ಏರಿಕೆ ಆಗಿದೆ.
ಲಾಕ್‍ಡೌನ್ ಸಮಯದಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದಲ್ಲಿತ್ತು. ಆದರೆ ಅನ್‍ಲಾಕ್ ಆಗುತ್ತಿದ್ದಂತೆ ಜನರ ಓಡಾಟದ ಜಾಸ್ತಿಯಾಗಿದ್ದು, ಅಂತರಾಜ್ಯ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಹೀಗಾಗಿ ಈಗ ಸೋಂಕಿತರ ಸಂಪರ್ಕ ಪತ್ತೆ ಹಚ್ಚುವುದೇ ದೊಡ್ಡ ಸವಾಲಾಗಿದೆ. ಲಾಕ್‍ಡೌನ್ ಸಮಯದಲ್ಲಿ ಕೊರೊನಾ ಬಗ್ಗೆ ಜನರಲ್ಲಿ ಸ್ವಲ್ಪವಾದರೂ ಭಯವಿತ್ತು. ಆದರೆ ಈಗ ಭಯ ಇಲ್ಲದಾಗಿದೆ. ಪರಿಣಾಮ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧನವಾಗಿ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.