Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಿನಲ್ಲಿ ಮತ್ತೆ ಲಾಕ್‍ಡೌನ್ ಇಲ್ಲವೇ ಇಲ್ಲ- ಸರ್ವಪಕ್ಷಗಳ ಸಭೆ ಬಳಿಕ ಶಾಸಕರು ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರಿನಲ್ಲಿ ಮತ್ತೆ ಲಾಕ್‍ಡೌನ್ ಇಲ್ಲವೇ ಇಲ್ಲ- ಸರ್ವಪಕ್ಷಗಳ ಸಭೆ ಬಳಿಕ ಶಾಸಕರು ಹೇಳಿದ್ದೇನು?

Bengaluru City

ಬೆಂಗ್ಳೂರಿನಲ್ಲಿ ಮತ್ತೆ ಲಾಕ್‍ಡೌನ್ ಇಲ್ಲವೇ ಇಲ್ಲ- ಸರ್ವಪಕ್ಷಗಳ ಸಭೆ ಬಳಿಕ ಶಾಸಕರು ಹೇಳಿದ್ದೇನು?

Public TV
Last updated: June 26, 2020 10:52 pm
Public TV
Share
3 Min Read
BNG LOCKDOWN
SHARE

ಬೆಂಗಳೂರು: ನಗರದಲ್ಲಿ ಕೊರೊನಾ ಸುನಾಮಿಯಂತೆ ನುಗ್ಗುತ್ತಿದೆ. ಕಳೆದೊಂದು ವಾರದಿಂದ ಕೊರೋನಾ ಸ್ಫೋಟವಾಗುತ್ತಿದ್ದು, ಸೋಂಕಿನ ಶತಕದ ಮೇಲೆ ಶತಕ ದಾಖಲಾಗುತ್ತಿದೆ. ಹೆಮ್ಮಾರಿ ಕೊರೊನಾ ಹೆಮ್ಮಾರಿ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಇದರ ನಡುವೆ ಸೋಂಕಿತರ ಸಾವಿನ ಸಂಖ್ಯೆಯೂ ಭೀತಿ ಮೂಡಿಸುತ್ತಿದೆ. ಬೆಂಗಳೂರಿಗರನ್ನು `ಚೀನಿ ವೈರಸ್’ ನಿಂದ ರಕ್ಷಿಸಲು ಲಾಕ್‍ಡೌನ್ ಮತ್ತೆ ಜಾರಿಗೆ ತರಬೇಕು ಎಂಬ ಬಗ್ಗೆ ಬಗ್ಗೆ ವ್ಯಾಪಕ ಚರ್ಚೆ ಆಗಿತ್ತು.

ಸಿಲಿಕಾನ್ ಸಿಟಿ ಮತ್ತೆ ಲಾಕ್‍ಡೌನ್ ಆಗುತ್ತಾ? ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಆಗಲೂಬಹುದು ಎಂದು ಕೊಳ್ಳುತ್ತಿದ್ದ ಜನರ ಅನುಮಾನಕ್ಕೆ ಸರ್ಕಾರ ಸ್ಪಷ್ಟನೆ ನೀಡಿದ್ದು, ಬೆಂಗಳೂರು ಲಾಕ್‍ಡೌನ್ ಇಲ್ಲವೇ ಇಲ್ಲ ಎಂದು ಹೇಳಿದೆ. ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರು ಶಾಸಕರು, ಸಚಿವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆ ಬಳಿಕ ಲಾಕ್‍ಡೌನ್ ಜಾರಿಯ ಪ್ರಶ್ನೆಯೇ ಇಲ್ಲ ಅಂತಾ ಸಿಎಂ ಬಿಎಸ್‍ವೈ ಪುನರ್ ಉಚ್ಛರಿಸಿದರು.

BNG LOCKDOWN a

ಬೆಂಗಳೂರು ಸರ್ವಪಕ್ಷ ನಾಯಕರ ಸಭೆಗೆ ಮೊದಲು ಯಡಿಯೂರಪ್ಪ ಮತ್ತೆ ಲಾಕ್‍ಡೌನ್ ಪ್ರಶ್ನೆಯೇ ಇಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಈಗಷ್ಟೇ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ. ಹೀಗಾಗಿ ಮತ್ತೆ ಲಾಕ್‍ಡೌನ್ ಪ್ರಸ್ತಾಪ ಇಲ್ಲ ಎಂದರು. ಬಳಿಕ ಮಾತನಾಡಿದ ಬೆಂಗಳೂರಿನ ಕೊರೊನಾ ಉಸ್ತುವಾರಿ ಸಚಿವ ಅಶೋಕ್ ಅವರು ಕೂಡ, ಲಾಕ್‍ಡೌನ್ ಇಲ್ಲ. ಸೋಂಕು ಬಂದಿರುವ ಏರಿಯಾವನ್ನು ಸೀಲ್‍ಡೌನ್ ಮಾಡುತ್ತೇವೆ. ಜೀವ ಮತ್ತು ಜೀವನ ಎರಡೂ ಬಹಳ ಮುಖ್ಯ. ಜೀವಾನೂ ಉಳಿಬೇಕು. ಜೀವನಾನೂ ನಡೀಬೇಕು. ಕೊರೊನಾ ವೈರಸ್ ನಿಯಂತ್ರಣಕ್ಕೆ ಹಲವು ಸಲಹೆಗಳನ್ನು ಶಾಸಕರು ಕೊಟ್ಟಿದ್ದಾರೆ. ಅದನ್ನು ಜಾರಿಗೆ ತರುತ್ತೇವೆ. ಬೇರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರಲ್ಲಿ ಸೋಂಕು ಕಡಿಮೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್ ಮೀಸಲು ಇಡಲು ಸೂಚನೆ ನೀಡಲಾಗುತ್ತದೆ. ರೋಗ ಲಕ್ಷಣಗಳು ಇಲ್ಲದವರ ಕ್ವಾರಂಟೈನ್ ಮಾಡಲು ಕಲ್ಯಾಣ ಮಂಟಪ, ವಸ್ತು ಪ್ರದರ್ಶನ ಕೇಂದ್ರಗಳನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದರು.

BNG LOCKDOWN v copy

ಇತ್ತ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕರೆದಿದ್ದ ಸರ್ವಪಕ್ಷ ಸಭೆಗೆ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ಇಂದಿನ ಸಭೆಯಲ್ಲಿ ಕಾಂಗ್ರೆಸ್ ಶಾಸಕರ ಲಾಕ್‍ಡೌನ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಕೊರೊನಾ ಆರಂಭದ ದಿನಗಳಲ್ಲಿ ಮಾಡಿದ್ದು ಲಾಕ್‍ಡೌನ್ ಅಲ್ಲ, ನಿಜವಾಗಿಯೂ ಈಗ ಲಾಕ್‍ಡೌನ್ ಬೇಕು. ಅಲ್ಲದೇ ಸೋಂಕಿನ ನಿಯಂತ್ರಣಕ್ಕೆ ರ್ಯಾಂಡಮ್ ಟೆಸ್ಟ್ ಮಾಡಿಸಬೇಕು. ರಾಜ್ಯದ ಹಲವು ಭಾಗಗಳಲ್ಲಿ ಸೋಂಕಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಈ ಕುರಿತು ಸರ್ಕಾರಕ್ಕೆ ಗಂಭೀರತೆ ಬರಬೇಕಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದುಬಾರಿ ಆಗುತ್ತಿದೆ. ಸರಿಯಾದ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಸಮಸ್ಯೆಯಾಗದಂತೆ ಮತ್ತಷ್ಟು ಎಚ್ಚರಿಕೆ ವಹಿಸಿಬೇಕು ಎಂದಿದ್ದರು.

ಬೆಂಗಳೂರಿನಲ್ಲಿ ಸಮುದಾಯದ ಹಂತಕ್ಕೆ ಹರಡಲು ಶುರುವಾಗಿದೆ. ಪ್ರತಿಯೊಬ್ಬರ ಪ್ರಾಣ ಕಾಪಾಡಬೇಕು ಅಂದರೆ ಲಾಕ್‍ಡೌನ್ ಮಾಡಲೇಬೇಕಿದೆ. ಅದರಲ್ಲೂ ನಗರದ ಸ್ಲಂಗಳಿಗೆ ಸೋಂಕು ಹರಡಬಾರದು. ಪ್ರಮುಖ ಮಾರ್ಕೆಟ್ ಏರಿಯಾಗಳಲ್ಲಿ ಸರ್ಕಾರ ಹೆಚ್ಚು ನಿಗಾವಹಿಸಬೇಕು. ಸೋಂಕಿತ ವ್ಯಕ್ತಿಗಳ ಅಂತ್ಯಸಂಸ್ಕಾರ ಸರಿಯಾದ ಕ್ರಮದಲ್ಲಿ ನಿರ್ವಹಿಸುತ್ತಿಲ್ಲ ಎಂದು ಸೋಂಕು ತಡೆಗಟ್ಟುವಲ್ಲಿ ಸರ್ಕಾರಕ್ಕೆ ಸಲಹೆಗಳನ್ನು ನೀಡಿದರು.

BNG LOCKDOWN c copy

ಈ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, ಕೇಂದ್ರ, ರಾಜ್ಯ ಸರ್ಕಾರಗಳು ಕೊರೊನಾ ನಿಯಂತ್ರಣದಲ್ಲಿ ವಿಫಲರಾಗಿದ್ದು, ಈಗ ಲಾಕ್‍ಡೌನ್ ಮಾಡುವ ಅಗತ್ಯವಿದೆ ಎಂದರು. ಸಿಎಂ ಸಭೆ ಬಳಿಕ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಸರ್ಕಾರಕ್ಕೆ ಲಾಕ್‍ಡೌನ್ ಮಾಡೋ ಮನಸ್ಸಿನಲ್ಲ. ಈಗ ಇರುವ ವಾತಾವರಣದಲ್ಲೇ ಕೋವಿಡ್ ನಿಯಂತ್ರಣ ಮಾಡಬೇಕೆಂಬ ಮನಸ್ಸು ಅವರಿಗಿದೆ. ನಮ್ಮ ಸಲಹೆ ಸೂಚನೆಯನ್ನು ಸರ್ಕಾರ ಪಾಲನೆ ಮಾಡಿಲ್ಲ ಎಂದು ಸಭೆಯಲ್ಲಿ ಹೇಳಿರುವುದಾಗಿ ತಿಳಿಸಿದರು.

ದಿನೇಶ್ ಗುಂಡೂರಾವ್ ಮಾತನಾಡಿ, ಸರ್ಕಾರಕ್ಕೆ ಲಾಕ್‍ಡೌನ್ ಮಾಡುವ ಸಾಮರ್ಥ್ಯವಿಲ್ಲ. ಮೊದಲ ಲಾಕ್‍ಡೌನ್ ನಿರ್ವಹಿಸುವಲ್ಲಿ ಅವರು ವಿಫಲರಾಗಿದ್ದು, ಸರ್ಕಾರ ಎಲ್ಲಿ ಎಡವಿರದೇ ಎಂಬುದನ್ನು ಗಮನಕ್ಕೆ ತಂದಿದ್ದೇವೆ. ಸರ್ಕಾರನೂ ನಮ್ಮ ಸಲಹೆಗಳನ್ನು ಸ್ವೀಕರಿಸಿ ಭರವಸೆ ನೀಡಿದೆ ಎಂದರು. ಬಳಿಕ ಮಾತನಾಡಿದ ಸಂಸದ ಡಿಕೆ ಸುರೇಶ್, ಸಾಕಷ್ಟು ಕಡೆ ಸಮಸ್ಯೆ ಇದೆ. ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಕೋವಿಡ್ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಅವ್ಯವಸ್ಥೆ ಸರಿಪಡಿಸಲು ಸಲಹೆ ನೀಡಿದ್ದೇನೆ ಎಂದರು. ನಗರದಲ್ಲಿ ಕೊರೊನಾ ಸಮುದಾಯಕ್ಕೆ ಹರಡುವ ಪ್ರಕ್ರಿಯೆ ಆರಂಭವಾಗಿದ್ದು, ಕನಿಷ್ಠ 10 ದಿನಗಳ ಕಾಲ ಲಾಕ್‍ಡೌನ್ ಮಾಡಬೇಕಿದೆ ಎಂದು ಶಾಸಕ ಹ್ಯಾರಿಸ್ ಹೇಳಿದರು. ಸದ್ಯಕ್ಕೆ ಬೆಂಗಳೂರಿಗಳಲ್ಲಿ ಇದ್ದ ಲಾಕ್‍ಡೌನ್ ಆತಂಕ ದೂರವಾಗಿದ್ದು, ಎಚ್ಚರಕೆ ವಹಿಸದೆ ಬೇಕಾಬಿಟ್ಟಿ ಓಡಾಟ ನಡೆಸುದರೆ ಸೋಂಕು ಮತ್ತಷ್ಟು ಹೆಚ್ಚಾಗಲಿದೆ.

TAGGED:bengaluruCM BS YeddyurappaCoronaCovid 19Lockdownr ashoksiddaramaiahಆರ್ ಅಶೋಕ್ಕೊರೊನಾಕೋವಿಡ್ 19ಬೆಂಗಳೂರುಲಾಕ್‍ಡೌನ್ಸಿಎಂ ಬಿಎಸ್ ಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Lucknow Murder
Crime

ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

Public TV
By Public TV
13 minutes ago
Vegitables
Bengaluru City

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ

Public TV
By Public TV
22 minutes ago
school student heart attack
Davanagere

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

Public TV
By Public TV
1 hour ago
Mantralaya Sri Raghavendra Swamy
Districts

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Public TV
By Public TV
2 hours ago
Mushroom Pakoda
Food

ಸಂಜೆ ಸ್ನಾಕ್ಸ್‌ಗೆ ಮಾಡಿ ಕ್ರಿಸ್ಪಿ ಮಶ್ರೂಮ್ ಪಕೋಡ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 24-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?