– ಇಡೀ ರಾತ್ರಿ ಡ್ರಿಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್
– ಶೇ.50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ
– ಡಿ.31ರ ಸಂಜೆಯಿಂದ 144 ಸೆಕ್ಷನ್ ಜಾರಿ
ಬೆಂಗಳೂರು: ಕೊರೊನಾ ಹಿನ್ನೆಲೆ ಹೊಸ ವರ್ಷದ ಪಾರ್ಟಿಗೆ ನಿರ್ಬಂಧಗಳನ್ನು ಹೇರಲಾಗಿದ್ದು, ರಸ್ತೆ, ಹೊರ ಜಾಗಗಳಲ್ಲಿ ಯಾವುದೇ ರೀತಿಯ ಪಾರ್ಟಿ ಆಯೋಜಿಸುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನ್ಯೂ ಇಯರ್ ಪಾರ್ಟಿ ನಡೆಯುತ್ತಿದ್ದ ಪ್ರಮುಖ ರಸ್ತೆಗಳಲ್ಲಿ ಪಾರ್ಟಿಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
Advertisement
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿಸೆಂಬರ್ 31 ರಂದು ರಾತ್ರಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ರಸ್ತೆ, ಹೊರಜಾಗದಲ್ಲಿ ನ್ಯೂ ಇಯರ್ ಪಾರ್ಟಿ ಮಾಡುವಂತಿಲ್ಲ. ಖಾಸಗಿ ಜಾಗಗಳಲ್ಲಿ ಪಾರ್ಟಿ ಮಾಡಿಕೊಳ್ಳಬಹುದು. ಆದರೆ ಯಾವುದೇ ವಿಶೇಷ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಪಬ್, ಬಾರ್, ಕ್ಲಬ್ ಗಳಲ್ಲಿ ಯಾವುದೇ ಸಂಗೀತ ಕಾರ್ಯಕ್ರಮ, ಡ್ಯಾನ್ಸ್, ಮ್ಯೂಸಿಕ್ ಇರುವುದಿಲ್ಲ. ಸಾಮಾನ್ಯವಾಗಿ ಅಳವಡಿಸುವ ಮ್ಯೂಸಿಕ್ ಹಾಕಿಕೊಳ್ಳಬಹುದು ಎಂದು ವಿವರಿಸಿದರು.
Advertisement
Advertisement
ಪಬ್, ಬಾರ್, ಕ್ಲಬ್ ಗಳಲ್ಲಿ ಶೇ.50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಎಂ.ಜಿ.ರಸ್ತೆ, ಕೋರಮಂಗಲ, ಇಂದಿರಾ ನಗರಗಳಲ್ಲಿ ಪ್ರವೇಶಕ್ಕೆ ಸಂಬಂಧಪಟ್ಟ ಹೋಟೆಲ್, ಪಬ್‍ನ ಪಾಸ್ ಅಥವಾ ಕೂಪನ್ ಹೊಂದಿರಬೇಕು. ಇಲ್ಲವಾದಲ್ಲಿ ಈ ಪ್ರದೇಶಗಳಲ್ಲಿ ಅನವಶ್ಯಕವಾಗಿ ಸಂಚರಿಸುವವರಿಗೆ ಅವಕಾಶವಿಲ್ಲ. ಮಾರ್ಗಸೂಚಿ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ರೀತಿಯ ಉಲ್ಲಂಘನೆ ಕಂಡುಬಂದರೆ ಸಾರ್ವಜನಿಕರು ದೂರು ನೀಡಬಹುದು ಎಂದು ಕಮಲ್ ಪಂಥ್ ತಿಳಿಸಿದರು.
Advertisement
ಡಿಸೆಂಬರ್ 31ರಂದು ಅನವಶ್ಯಕವಾಗಿ ಯಾರೂ ಹೊರಗಡೆ ಓಡಾಡಬಾರದು. ಆ ರೀತಿ ತಿರುಗಾಡೋದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ವ್ಹೀಲಿಂಗ್ ಮಾಡಿದರೆ ವಾಹನ ಜಪ್ತಿ ಮಾಡಲಾಗುವುದು. ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1 ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತದೆ.
ಮೇಟ್ರೋ ಓಡಾಟದ ಬಗ್ಗೆ ಬಿಎಮ್‍ಆರ್‍ಸಿಎಲ್ ತಿರ್ಮಾನ ತೆಗೆದುಕೊಳ್ಳುತ್ತದೆ. ಆದರೆ ಇಡೀ ರಾತ್ರಿ ಡ್ರಿಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್ ಇರುತ್ತೆ. ಪಬ್ ಆ್ಯಂಡ್ ಬಾರ್‍ಗಳಿಗೆ ಯಾವುದೇ ಸಮಯ ಇರುವುದಿಲ್ಲ. ಈ ಹಿಂದಿನಂತೆ ಓಪನ್ ಇರುತ್ತವೆ. ಲೈಸೆನ್ಸ್‍ನಲ್ಲಿ ಎಷ್ಟು ಸಮಯದವರೆಗೆ ವ್ಯಾಪಾರ ಮಾಡಬಹುದು ಎಂದು ಅನುಮತಿ ಪಡೆದಿದ್ದಾರೋ ಅಲ್ಲಿಯವರೆಗೆ ಓಪನ್ ಮಾಡಬಹುದಾಗಿದೆ.