ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ಮೇ 26ರಿಂದ ಕೇರಳಕ್ಕೆ ಮುಂಗಾರು ಎಂಟ್ರಿ
ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ 4,500 ಕೋಟಿ ವಂಚನೆ ಆರೋಪ ಕೇಸ್; ಶಿವಾನಂದ್ ನೀಲಣ್ಣವರ್ ಬಂಧನ

