ಶಿವಮೊಗ್ಗ: ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಮುಸ್ಲಿಂ ಸಂಘಟನೆ ಇರುವ ಅನುಮಾನ ಕಾಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೋ ಮುಸ್ಲಿಂ ಸಂಘಟನೆಯೇ ಭಾಗಿಯಾಗಿದೆ ಎಂಬ ಅನುಮಾನ ಕಾಡುತ್ತಿದೆ. ಬೆಡ್ ಬ್ಲಾಕ್ ಮಾಡಿಕೊಂಡಿರುವುದರಲ್ಲಿ ಅತಿ ಹೆಚ್ಚು ಮುಸ್ಲಿಮರು ಇರುವುದು ಕಾಣುತ್ತಿದೆ. ರಾಜ್ಯದಲ್ಲಿ ಹಾಗೋ ಹೀಗೋ ಕೊರೊನಾ ಮ್ಯಾನೇಜ್ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂಬ ಪ್ರಯತ್ನವನ್ನು ಕೆಲವು ವ್ಯಕ್ತಿಗಳು ಮಾಡುತ್ತಿದ್ದಾರೆ. ಆ ದಿಕ್ಕಿನಲ್ಲಿ ನಮ್ಮ ಸಂಸದರು, ಶಾಸಕರು ಪ್ರಯತ್ನ ಮಾಡಿ ಇದನ್ನು ಹೊರ ತಂದಿದ್ದಾರೆ ಎಂದರು. ಇದನ್ನೂ ಓದಿ: ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ – ಬೇಸರ ತೋಡಿಕೊಂಡ ಸರ್ಫರಾಜ್ ಖಾನ್
Advertisement
Advertisement
ಇದರ ಹಿಂದೆ ಯಾರಿದ್ದಾರೆ ಎಂಬುದು ತನಿಖೆ ನಂತರ ಗೊತ್ತಾಗುತ್ತೆ. ಅದು ಸಂಘಟನೆಯೋ, ವ್ಯಕ್ತಿಗಳೋ ಸ್ಪಷ್ಟ ಆಗಬೇಕಾಗುತ್ತದೆ. ಇದು ತನಿಖೆಯಿಂದ ಹೊರ ಬರಲಿದೆ, ತಪ್ಪಿತಸ್ಥರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ. ಬೆಂಗಳೂರಿನಲ್ಲಿ ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಸಿಕ್ಕಿದ್ದಾರೆ. ಅದೇ ರೀತಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇದರ ಬಗ್ಗೆ ಅಲರ್ಟ್ ಆಗಿರುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.