ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳಕಿಗೆ ಬಂದ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ ಅವರು, ಬಿಬಿಎಂಪಿ ಪೋರ್ಟಲ್ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕಾಯ್ದಿರಿಸುವ ವಿಧಾನದಲ್ಲಿ ಅಕ್ರಮ ಎಸಗಿದವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅಕ್ರಮದಲ್ಲಿ ಭಾಗಿಯಾದವರ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement
ಬಿಬಿಎಂಪಿ ಪೋರ್ಟಲ್ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕಾಯ್ದಿರಿಸುವ ವಿಧಾನದಲ್ಲಿ ಅಕ್ರಮ ಎಸಗಿದವರ ವಿರುದ್ಧ @jayanagarps ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅಕ್ರಮದಲ್ಲಿ ಭಾಗಿಯಾದವರ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು @CCBBangalore ವರ್ಗಾಯಿಸಲಾಗಿದೆ.
— Pratap Reddy, IPS ಪೊಲೀಸ್ ಆಯುಕ್ತರು, ಬೆಂಗಳೂರು ನಗರ (@CPBlr) May 4, 2021
Advertisement
ಏನಿದು ಪ್ರಕರಣ..?
ಹೋಂ ಐಸೋಲೇಟ್ ಆಗುವ ವ್ಯಕ್ತಿಗಳಿಗೆ ತಿಳಿಯದಂತೆ ಅವರ ಹೆಸರಿನಲ್ಲಿ ಬೆಡ್ ಮೀಸಲಿರಿಸುವ ಮಹಾದಂಧೆ ಬಯಲಾಗಿತ್ತು. ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿಯ ಕಳ್ಳಾಟವನ್ನ ಬಯಲು ಮಾಡಿದ್ದು, ಸೋಂಕಿತರ ಜೊತೆ ಮಾತನಾಡಿ ಸೀಟ್ ಸಿಕ್ಕಿದೆಯಾ ಅಥವಾ ಇಲ್ಲವಾ ಅನ್ನೋದನ್ನ ಖಚಿತಪಡಿಸಿಕೊಂಡಿದ್ದರು. ಸೋಂಕಿತರ ಕುಟುಂಬಸ್ಥರ ಜೊತೆ ತೇಜಸ್ವಿ ಸೂರ್ಯ ಮಾತನಾಡಿರುವ ಆಡಿಯೋಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು. ಇದನ್ನೂ ಓದಿ: ಬೆಡ್ ದಂಧೆ ನಡೆಯೋದು ಹೇಗೆ ಅನ್ನೋದನ್ನ ವಿವರಿಸಿದ ತೇಜಸ್ವಿ ಸೂರ್ಯ
Advertisement
ಬೆಂಗಳೂರು ದಕ್ಷಿಣ ಭಾಗದಲ್ಲಿ ಬಿಬಿಎಂಪಿಯ ವಾರ್ ರೂಂ ಅಧಿಕಾರಿಗಳೇ ಕೃತಕ ಬೆಡ್ ಅಭಾವ ಸೃಷ್ಟಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಹೋಂ ಐಸೋಲೇಟ್ ನಲ್ಲಿರುವ ಸೋಂಕಿತನ ಹೆಸರಲ್ಲಿ ಬೆಡ್ ಬುಕ್ ಆದ್ರೆ, ಅದು ಯಾರಿಗೆ ನೀಡಲಾಗುತ್ತೆ ಎಂಬುದರ ಬಗ್ಗೆ ತಿಳಿದು ಬರಬೇಕಿದೆ. ಮಹಾನಗರ ಬೆಂಗಳೂರಿನಲ್ಲಿ ಕೃತಕ ಬೆಡ್ ಅಭಾವದಿಂದಲೇ ಈ ಹೆಲ್ತ್ ಎಮೆರ್ಜೆನ್ಸಿ ಉಂಟಾಗಿದೆಯಾ ಅನ್ನೋ ಅನುಮಾನಗಳು ದಟ್ಟವಾಗಿದೆ. ಇದನ್ನೂ ಓದಿ: ನೀವೂ ಮನೆಯಲ್ಲಿದ್ರೂ ನಿಮ್ಮ ಹೆಸರಲ್ಲಿ ಬುಕ್ ಆಗುತ್ತೆ ಬೆಡ್ – ಬೇಕಾದವರಿಗೆ ಬೆಡ್ ನೀಡುವ ಧನದಾಹಿಗಳು
Advertisement