ಬೆಂಗಳೂರು: ಬೆಡ್ ಬ್ಲಾಕ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈ ಪೈಕಿ ಆರೋಪಿ ಒಬ್ಬಳು ಕಾಂಗ್ರೆಸ್ ನಾಯಕರ ಜೊತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರು ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ(42) ಮತ್ತು ರೋಹಿತ್(32) ಅವರನ್ನು ಬಂಧಿಸಿದ್ದಾರೆ. ಈ ಪೈಕಿ ನೇತ್ರಾವತಿ ಹಲವು ಕಾಂಗ್ರೆಸ್ ನಾಯಕರ ಜೊತೆ ಇರುವ ಫೋಟೋಗಳು ಈಗ ಹರಿದಾಡುತ್ತಿದೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ಜೊತೆಗೆ ಇರುವ ಫೋಟೋಗಳು ಹರಿದಾಡುತ್ತಿದೆ.
ಬಂಧಿತ ನೇತ್ರಾವತಿ ಮತ್ತು ರೋಹಿತ್ ನೆರೆಮನೆ ನಿವಾಸಿಯಾಗಿದ್ದಾರೆ. ನಾನು ಸಾಮಾಜಿಕ ಕಾರ್ಯಕರ್ತೆ ಎಂದು ಪೊಲೀಸರ ಬಳಿ ನೇತ್ರಾವತಿ ಹೇಳಿದ್ದಾಳೆ.
ಬಿಬಿಎಂಪಿ ವಾರ್ ರೂಮಿನಲ್ಲಿ ಈಕೆ ಹಲವರ ಜೊತೆ ಸಂಪರ್ಕದಲ್ಲಿರುವುದು ಖಚಿತವಾಗಿದೆ. ಈ ದಂಧೆಯ ಹಿಂದೆ ದೊಡ್ಡ ಜಾಲವೇ ಇರುವುದು ಸಿಸಿಬಿ ಗಮನಕ್ಕೆ ಬಂದಿದೆ. ಈಗ ಪೊಲೀಸರು ಇವರ ಜೊತೆ ಸಂಪರ್ಕದಲ್ಲಿದ್ದವರ ಪತ್ತೆಗೆ ಮುಂದಾಗುತ್ತಿದ್ದಂತೆ ಹಲವರು ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.