ಬೆಳಗಾವಿ: ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದುರುದ್ದೇಶಪೂರಿತ ಆರೋಪ ಮಾಡಲಾಗುತ್ತಿದೆ. ರಮೇಶ್ ಜಾರಕಿಹೊಳಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಬೇಕೆಂದು ಅವರಲ್ಲಿ ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Advertisement
ಈ ಕುರಿತು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಲಾಗುತ್ತಿದ್ದು, ಎಸ್‍ಐಟಿ ಸಮರ್ಪಕವಾಗಿ ನಡೆಸುತ್ತಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಅನಗತ್ಯ, ರಾಜಕೀಯ ದುರುದ್ದೇಶಪೂರಿತ ಆರೋಪಗಳನ್ನು ಮಾಡುತ್ತಿದ್ದಾರೆ. ಸಿಡಿ ಪ್ರಕರಣ ಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ರಮೇಶ್ ಜಾರಕಿಹೊಳಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿ ಎಂದು ಸಿಎಂ ತಿಳಿಸಿದರು.
Advertisement
ರಾಜ್ಯದ ಕಾನೂನು ಹಾಗೂ ಗೃಹ ಸಚಿವರು ಸಂಪೂರ್ಣ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ಪ್ರಕರಣದ ಬೆಳವಣಿಗೆಗಳನ್ನು ನನಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಕಾನೂನು ಸಚಿವರು ಹಾಗೂ ಗೃಹ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಎಸ್‍ಐಟಿ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎನ್ನುವುದರಲ್ಲಿ ಯಾವುದೇ ಸತ್ಯಾಂಶ ಇಲ್ಲ, ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದೆ. ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ ಎಂದರು.
Advertisement
Advertisement
ಈಗತಾನೇ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಪತ್ನಿ ಅವರು ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು 2 ಲಕ್ಷ ಮತಗಳ ಅಂತರದಿಂದ ಜನ ಅಯ್ಕೆ ಮಾಡುತ್ತಾರೆ. ಲೋಕಸಭೆ, ವಿಧಾನಸಭೆ ಉಪ ಚುನಾವಣೆಯಲ್ಲಿ ಬಹುದೊಡ್ಡ ಅಂತರದಲ್ಲಿ ಬಿಜೆಪಿ ಜಯಗಳಿಸಲಿದೆ ಎಂದರು.