ಬೆಳಗಾವಿ: ಲಕ್ಷಾಂತರ ರೂಪಾಯಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ವ್ಯಕ್ತಿಗಳು ಆರ್ಮಿ ಮತ್ತು ಅಂತಾರಾಜ್ಯ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಸಿಸಿಬಿಐ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ ಡಿಸಿಪಿ ವಿಕ್ರಮ್ ಆಮ್ಟೆ ನೇತೃತ್ವದ ಸಿಸಿಐಬಿ ಎಸಿಪಿ ನಾರಾಯಣ ಭರಮನಿ, ಪಿಐ ಸಂಜೀವ ಕಾಂಬಳೆ ತಂಡ ಕಾರ್ಯಾಚರಣೆ ನಡೆಸಿದೆ.
ಈ ವೇಳೆ ರಾಜೇಶ್ ನಾಯಿಕ, ಶಂಕರ್ ದೇಸನೂರ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳ ಬಳಿ ಇದ್ದ ವಿವಿಧ ಬ್ರ್ಯಾಂಡ್‍ನ 13 ಲಕ್ಷ ಮೌಲ್ಯದ 547 ಮದ್ಯದ ಬಾಟಲಿಗಳನ್ನು ಹಾಗೂ 1 ಕಾರನ್ನು ವಶಪಡಿಸಿಕೊಂಡಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಮುಂಬರುವ ಲೋಕಸಭೆ ಉಪ ಚುನಾವಣೆ ಸಮಯದಲ್ಲಿ ಮಾರಾಟ ಮಾಡಲು ಮದ್ಯ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.