– ಸ್ನೇಹಿತ ಪಿ.ಜಿಗೆ ಬಂದಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೆಳಗಾವಿ: ಎಂಬಿಎ ಪದವೀಧರೆಯೊಬ್ಬಳು (MBA Graduate) ಪಿ.ಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ (Belagavi) ನಡೆದಿದೆ.
ವಿಜಯಪುರ (Vijayapura) ಜಿಲ್ಲೆಯ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ಯುವತಿ. ವಿಜಯಪುರದಲ್ಲಿಯೇ ಎಂಬಿಎ ಪದವಿ ಓದಿದ್ದ ಐಶ್ವರ್ಯ ಕೆಲಸಕ್ಕಾಗಿ ಬೆಳಗಾವಿಗೆ ಬಂದಿದ್ದಳು. ಬೆಳಗಾವಿಯ ಕಂಪನಿಯೊಂದರಲ್ಲಿ ಕಲಿಕಾ ತರಬೇತಿಯಲ್ಲಿದ್ದ ಐಶ್ವರ್ಯ ಕಳೆದ ಮೂರು ತಿಂಗಳಿನಿಂದ ನೆಹರು ನಗರದ ಪಿ.ಜಿಯಲ್ಲಿ ವಾಸವಿದ್ದಳು. ಆತ್ಮಹತ್ಯೆಗೆ ಮುನ್ನ ಗೆಳತಿಯೊಂದಿಗೆ ಮಾತನಾಡಿ ರೂಂಗೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾತ್ರವಲ್ಲದೇ ಯುವತಿ ಸ್ನೇಹಿತ ಕೂಡ ಪಿ.ಜಿಗೆ ಬಂದು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲವ್ ಬ್ರೇಕಪ್ ಯುವತಿ ಆತ್ಮಹತ್ಯೆಗೆ ಕಾರಣವಾಯ್ತಾ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕಡಲಾಚೆಯ ಗಣಿಗಾರಿಕೆ ಯೋಜನೆಗೆ ಕೇರಳದ ವಿರೋಧವೇಕೆ? – ಯೋಜನೆಯ ಮಹತ್ವವೇನು?
ಮಂಗಳವಾರ ಸಂಜೆ 6:30 ರಿಂದ 7:30ರ ಅವಧಿಯಲ್ಲಿ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಫೋನ್ ರಿಸೀವ್ ಮಾಡದಿದ್ದಕ್ಕೆ ಆಕೆಯ ಸ್ನೇಹಿತ ಪಿ.ಜಿಗೆ ಗಾಬರಿಯಿಂದ ಬಂದಿದ್ದ. ಪಿ.ಜಿ ರೂಂನ ಬಾಗಿಲು ಒಡೆದು ನೋಡಿದಾಗ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಐಶ್ವರ್ಯ ಸ್ನೇಹಿತ ಅಲ್ಲಿಂದ ವಾಪಸ್ ಹೋಗುತ್ತಿರುವುದನ್ನು ಸ್ಥಳೀಯರು ಕೂಡ ನೋಡಿದ್ದಾರೆ. ಇದನ್ನೂ ಓದಿ: ಮನೆ ಓನರ್ ಹೆಂಡ್ತಿ ಜೊತೆಗೇ ಕಳ್ಳಸಂಬಂಧ – ಬಾಡಿಗೆದಾರನನ್ನ 7 ಅಡಿ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ ಪತಿ!
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಐಶ್ವರ್ಯ ಮೊಬೈಲ್ನ ಕಾಲ್ ಡೀಟೈಲ್ಸ್ ಪರಿಶೀಲನೆಗೆ ಮುಂದಾಗಿದ್ದಾರೆ. ಅಲ್ಲದೇ ಪಿಜಿಗೆ ಬಂದು ಹೋದ ಸ್ನೇಹಿತನಿಗಾಗಿ ಶೋಧ ನಡೆಸುತ್ತಿದ್ದಾರೆ. ಐಶ್ವರ್ಯ ಆತ್ಮಹತ್ಯೆಗೆ ಅಸಲಿ ಕಾರಣ ಪೊಲೀಸ್ ತನಿಖೆಯಿಂದ ಗೊತ್ತಾಗಬೇಕಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: Tumakuru | 19 ಸಾವಿರ ಗಡಿ ದಾಟಿದ ಕ್ವಿಂಟಲ್ ಕೊಬ್ಬರಿ ಧಾರಣೆ – ಸಾರ್ವಕಾಲಿಕ ದಾಖಲೆ