ಬೆಂಗಳೂರು: ಬೆಳ್ಳಂಬೆಳಗ್ಗೆ ತುಪ್ಪದ ಬೆಡಗಿ ನಟಿ ರಾಗಿಣಿ ಮನೆಯ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಸರ್ಚ್ ವಾರೆಂಟ್ ಪಡೆದು ಯಲಹಂಕದಲ್ಲಿರುವ ನಟಿ ರಾಗಿಣಿ ಮನೆ ಮೇಲೆ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐದರಿಂದ ಆರು ಮಂದಿ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಕೇಸ್ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ. ರಾಗಿಣಿ ಮನೆಯಲ್ಲಿಯೇ ಇದ್ದು, ಸಿಸಿಬಿ ಕೋರ್ಟಿನಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ವಿಚಾರಣೆಗೆ ಹಾಜರಾಗದಿರಲು ಪೊಲೀಸರಿಗೆ ರಾಗಿಣಿ ನೀಡಿದ ಕಾರಣ
Advertisement
ನಟಿ ರಾಗಿಣಿ ಮನೆ ಮೇಲೆ ರೈಡ್ ಮಾಡಿರೋದಾಗಿ ಅಪರಾಧ ವಿಭಾಗದ ಜಂಟಿ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ರಾಗಿಣಿ ಆಪ್ತ ರವಿಶಂಕರ್ ನನ್ನ ಸಿಸಿಬಿ ಬಂಧಿಸಿದ್ದರು. ಆತ ನೀಡಿದ ಮಾಹಿತಿ ಆಧಾರದ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ರಾಗಿಣಿಗೆ ಮನೆಗೆ ಸಿಸಿಬಿ ಅಧಿಕಾರಿಗಳು ಆಗಮಿಸಿದ್ದಾರೆ. ಇದನ್ನೂ ಓದಿ: ಸಿಸಿಬಿ ನೋಟಿಸ್ ನೀಡಿದ್ದು ನಿಜ: ರಾಗಿಣಿ ದ್ವಿವೇದಿ
Advertisement
ಸಿಸಿಬಿ ಅಧಿಕಾರಿಗಳು ನಟಿ ರಾಗಿಣಿಯ ಇಡೀ ಮನೆಯನ್ನು ತಪಾಸಣೆ ನಡೆಸುತ್ತಿದ್ದಾರೆ. ಇದೇ ವೇಳೆ ರಾಗಿಣಿಗೆ ಸೇರಿದ ಬರೋಬ್ಬರಿ ನಾಲ್ಕು ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಚಲಾವಣೆ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಮನೆ ತಪಾಸಣೆ ಮಾಡುತ್ತಿದ್ದಾರೆ. ಇದೀಗ ನಟಿ ರಾಗಿಣಿ ಬಂಧನದ ಭೀತಿಯಲ್ಲಿದ್ದಾರೆ.
Advertisement
Advertisement
ಗುರುವಾರವೇ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದ್ದರು. ಆದರೆ ಕೊರೊನಾ ರೋಗಿಗಳಿಗೆ ಸಹಾಯ ಮಾಡುತ್ತಿದ್ದು, ಪ್ಲಾಸ್ಮಾ ಥೆರಪಿ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇನೆ. ಈ ಕಾರ್ಯಕ್ರಮ ಮೊದಲೇ ನಿಗದಿಯಾಗಿದ್ದು, ಬಿಟ್ಟು ಬಂದ್ರೆ ತೊಂದರೆ ಆಗಲಿದೆ. ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದು ವಕೀಲರ ಮೂಲಕ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ಸೋಮವಾರ ಬೇಡ, ನಾಳೆಯ ಬನ್ನಿ ಅನ್ನೋ ಸಂದೇಶವನ್ನು ಸಿಸಿಬಿ ಅಧಿಕಾರಿಗಳು ರವಾನಿಸಿದ್ದರು.