ಬೆಳ್ಳಂಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ – ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿ

Public TV
1 Min Read
fire 4 1

ಕೊಪ್ಪಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೂರು ಅಂಗಡಿಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ.

fire 2 1

ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಈ ಘಟನೆ ನಡೆದಿದೆ. ಬೆಳಗ್ಗೆ ಸುಮಾರು 3.30ರ ವೇಳೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಒಂದು ಅಂಗಡಿಗೆ ಬೆಂಕಿ ಹೊತ್ತಿಕೊಂಡು ಬಳಿಕ ಮತ್ತೆರಡು ಅಂಗಡಿಗಳಿಗೂ ವ್ಯಾಪಿಸಿದೆ. ಹಣ್ಣಿನ ಅಂಗಡಿ, ಚಪ್ಪಲಿ ಅಂಗಡಿ ಹಾಗೂ ವಾಚ್ ರಿಪೇರಿ ಅಂಗಡಿ ಬೆಂಕಿಗೆ ಆಹುತಿಯಾಗಿವೆ.

fire 3 1

ಘಟನೆ ವೇಳೆ ಅಂಗಡಿಗಳಲ್ಲಿದ್ದ ಹಣ್ಣು ಸೇರಿದಂತೆ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಕುರಿತಂತೆ ಇದೀಗ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *