ಹುಬ್ಬಳ್ಳಿ/ಧಾರವಾಡ: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಅಕ್ರಮ ಆಸ್ತಿವಿಚಾರವಾಗಿ ಕೋಲಾರ ಜಿಲ್ಲಾ ಅರೋಗ್ಯಾಧಿಕಾರಿ, ಧಾರವಾಡ ಅರಣ್ಯ ಇಲಾಖೆಯ ಅಧಿಕಾರಿ, ಹುಬ್ಬಳ್ಳಿಯಲ್ಲಿ ವಾಸವಾಗಿರುವ ಎಕ್ಸಿಕ್ಯೂಟಿವ್ ಇಂಜಿನೀಯರ್ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಕ್ರಮವಾಗಿ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಹುಬ್ಬಳ್ಳಿಯ ರಾಜೀವ್ ಗಾಂಧಿ ನಗರದ ಮನೆ ಸೇರಿದಂತೆ ನಾಲ್ಕು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
Advertisement
Advertisement
ಹುಬ್ಬಳ್ಳಿಯಲ್ಲಿ ವಾಸವಾಗಿರುವ ಎಕ್ಸಿಕ್ಯೂಟಿವ್ ಇಂಜಿನೀಯರ್ ದೇವರಾಜ್ ಶಿಗ್ಗಾಂವಿ ಎಂಬವರ ಮನೆ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದೇವರಾಜ್ ಶಿಗ್ಗಾಂವ ಧಾರವಾಡದ ನೀರಾವರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು. ನೀರಾವರಿ ಇಲಾಖೆಯಲ್ಲಿದ್ದ ದೇವರಾಜ್ ಸದ್ಯ ಧಾರವಾಡದ ಮುಖ್ಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
Advertisement
Advertisement
ಇಂದು ಮೂರು ವಾಹನಗಳೊಂದಿಗೆ ಆಗಮಿಸಿರುವ ಎಸಿಬಿ ತಂಡ ರಾಜೀವ ಗಾಂಧಿ ನಗರ, ಬಾಲಾಜಿ ನಗರ, ಕೋಟಿಲಿಂಗ ನಗರ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಮೂರು ತಂಡಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಮನೆಯ ಪ್ರತಿ ಕಡೆಯೂ ತಪಾಸಣೆ ಮಾಡುತ್ತಿದ್ದಾರೆ. ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದು ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ಎಸಿಬಿ ದಾಳಿ ಆರಂಭವಾದಾಗಿಂದ ಮನೆಯ ಯಾವುದೇ ಸದಸ್ಯರನ್ನ ಹೊರಗೆ ಬಿಡದೇ ಹಲವು ದಾಖಲಾತಿಗಳನ್ನ ಕೇಳಿ ಪಡೆದು ಪರಿಶೀಲನೆ ಮುಂದುವರಿಸಿದ್ದಾರೆ.
ಕೋಲಾರ ಜಿಲ್ಲಾ ಅರೋಗ್ಯಾಧಿಕಾರಿಗೆ ಎಸಿಬಿ ಶಾಕ್ ನೀಡಿದೆ. ಡಿಹೆಚ್‍ಓ ಡಾ.ವಿಜಯ್ ಕುಮಾರ್ ಅವರ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಚಿತ್ರದುರ್ಗದಲ್ಲಿ ಎಸಿಬಿ ಅಧಿಕಾರಿಗಳು ಧಾರವಾಡ ಅರಣ್ಯ ಇಲಾಖೆಯ ಅಧಿಕಾರಿ ಶ್ರೀನಿವಾಸ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶಿಲನೆ ಮಾಡುತ್ತಿದ್ದಾರೆ.