ಬೆಂಗಳೂರು: ಬೆಳ್ಳಂ ಬೆಳಗ್ಗೆ ಜಾಲಿ ರೈಡ್ ಬಂದವರಿಗೆ ಪೊಲೀಸರು ಶಾಕ್ ನೀಡಿದ್ದಾರೆ.
ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಟೋಲ್ ಬಳಿ 40ಕ್ಕೂ ಹೆಚ್ಚು ಬೈಕ್ ಹಾಗೂ ಕಾರುಗಳ ವಶಕ್ಕೆ ಪಡೆಯಲಾಗಿದೆ. ಈ ಕಾರು ಹಾಗೂ ಬೈಕ್ ಸವಾರರು ತಮ್ಮ ವಾಹನವನ್ನು ಸೈಲೆನ್ಸರ್ ಮಾರ್ಪಾಡು ಮಾಡಿಕೊಂಡು ಮಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಚಾಲನೆ ಮಾಡುತ್ತಿದ್ದರು.
ಅತಿಯಾದ ಸೌಂಡ್ ಹಾಗೂ ವಾಯು ಮಾಲಿನ್ಯ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಆರ್‌ಟಿಓ ಅಧಿಕಾರಿಗಳು ಕಾರ್ಯಚರಣೆ ನಡೆಸಿ ವಶಕ್ಕೆ ಪಡೆಯಲಾಗಿತ್ತು. ವಶಕ್ಕೆ ಪಡೆದ ಬೈಕ್ ಮತ್ತು ಕಾರುಗಳು ಉದ್ಯಮಿ ಮತ್ತು ರಾಜಕೀಯ ನಾಯಕರ ಮಕ್ಕಳಿಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿದೆ. ಮೇಲಾಧಿಕಾರಿಗಳ ಒತ್ತಡದಿಂದಾಗಿ ವಶಕ್ಕೆ ಪಡೆದ ವಾಹನಗಳನ್ನು ಬಿಡಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ:ಕಾಣಿಕೆ ಹುಂಡಿ ಕದ್ದ ಕಳ್ಳರು – ಮುಖ್ಯ ರಸ್ತೆಯಲ್ಲಿರುವ ದೇವಾಲಯಕ್ಕಿಲ್ಲ ರಕ್ಷಣೆ