– ವಿಧವೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆಟೋ ಡ್ರೈವರ್
– ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿ
ತಿರುವನಂತಪುರಂ: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಆಟೋ ಡ್ರೈವರ್ ಕೊಲೆ ಮಾಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶೋಭಾ (37) ಮೃತ ಮಹಿಳೆ. ಆರೋಪಿ ಬಿಬಿನ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಶೋಭಾ ವಿಧವೆಯಾಗಿದ್ದು, ಆರೋಪಿ ಆಡೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದನು.
ಏನಿದು ಪ್ರಕರಣ?
ಮಂದಮಚೇರಿ ಮೂಲದ ಶೋಭಾ ಆಗಸ್ಟ್ 24 ರಂದು ಕಾಣೆಯಾಗಿದ್ದು, ಕುಟುಂಬದವರು ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದ ಪೊಲೀಸರಿಗೆ ಆಗಸ್ಟ್ 28 ರಂದು ಶೋಭಾ ಮನೆಯಿಂದ ಸುಮಾರು 34 ಕಿ.ಮೀ ದೂರದಲ್ಲಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತ ಶೋಭಾಗೆ ಮದುವೆಯಾಗಿದ್ದು, ಪತಿ ಮೃತಪಟ್ಟಿದ್ದನು. ಆರೋಪಿ ಬಿಬಿನ್ ಫೇಸ್‍ಬುಕ್ ಮೂಲಕ ಶೋಭಾಗೆ ಪರಿಚಯವಾಗಿದ್ದನು. ನಂತರ ಇಬ್ಬರು ಅನೈತಿಕ ಸಂಬಂಧ ಹೊಂದಿದ್ದರು. ಆದರೆ ಬಿಬಿನ್ ಇತ್ತೀಚೆಗೆ ಇನ್ನೊಬ್ಬ ಯುವತಿಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದನು. ಈ ಬಗ್ಗೆ ಮಾತನಾಡಲು ಶೋಭಾ ಆತನನ್ನು ನಿರ್ಜನ ಪ್ರದೇಶಕ್ಕೆ ಕರೆದಿದ್ದಾಳೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊನೆಗೆ ಆರೋಪಿ ಬಿಬಿನ್ ಕೋಪದಲ್ಲಿ ಶೋಭಾಳನ್ನು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ಮೃತ ಶೋಭಾಳ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದನು. ಪೊಲೀಸರು ಶೋಭಾ ಫೋನ್ ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ. ಆಗ ಆರೋಪಿ ಬಿಬಿನ್ ಶೋಭಾಳನ್ನು ಕೊಲೆ ಮಾಡಿರುವುದು ತಿಳಿದುಬಂದಿದೆ. ಇದೀಗ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.