– ಬೆಳಗ್ಗೆ 8 ರಿಂದ 1.30ರ ವರೆಗೆ ಕೆಲಸದ ಅವಧಿ ನಿಗದಿ
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬೇಗೆ ಹೆಚ್ಚಾಗುತ್ತಿದ್ದು, ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಶಾಖ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರಿ ಕಚೇರಿಗಳ ಸಮಯವನ್ನು ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ, ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳಿಗೆ ಅನ್ವಯ ಆಗುವಂತೆ ಸರ್ಕಾರ ಆದೇಶ ಹೊರಡಿಸಿದೆ. ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ವರೆಗೆ ಸರ್ಕಾರಿ ಕಚೇರಿ ಕೆಲಸದ ಅವಧಿಯನ್ನು ಬದಲಾವಣೆ ಮಾಡಲಾಗಿದೆ. ನಾಳೆಯಿಂದಲೇ ಹೊಸ ಆದೇಶ ಜಾರಿಯಾಗಲಿದ್ದು, ಅಧಿಕಾರಿಗಳು ಸಹ ಇದೇ ಸಮಯಕ್ಕೆ ಕೆಲಸಕ್ಕೆ ಹಾಜರಾಗಲಿದ್ದಾರೆ.
Advertisement
Advertisement
ಉತ್ತರ ಕರ್ನಾಟಕ ಭಾಗದಲ್ಲಿ ತಾಪಮಾನ ಹೆಚ್ಚುತ್ತಿದ್ದು, ಬಾಗಲಕೋಟೆಯಲ್ಲಿ ಗರಿಷ್ಠ 37, ಕಲಬುರಗಿ 36, ಯಾದಗಿರಿ 37 ಹಾಗೂ ವಿಜಯಪುರದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ತಾಖಲಾಗುತ್ತಿದೆ. ಹೀಗಾಗಿ ಕಚೇರಿ ಸಮಯವನ್ನು ಬದಲಿಸಿ ಸರ್ಕಾರ ಆದೇಶ ಹೊರಡಿಸಿದೆ.