ಚಿತ್ರದುರ್ಗ: ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಬಳಿ ಅಪಘಾತ ಸಂಭವಿಸಿದೆ.
30 ವರ್ಷದ ಸಂದೀಪ್ ಮತ್ತು 26 ವರ್ಷದ ಭವ್ಯ ಅಪಘಾತದಲ್ಲಿ ಮೃತ ದಂಪತಿ. ಮೃತರು ನಗರಂಗೆರೆ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ. ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ತೀವ್ರತೆ ದಂಪತಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.