– ಆರು ಜನರಿಗೆ ಗಂಭೀರ ಗಾಯ
ಹಾಸನ: ಬೈಕ್‍ಗೆ ಹಿಂದಿನಿಂದ ಕಾರ್ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿ, ಮೂವರು ಮಕ್ಕಳು ಸೇರಿ ಒಟ್ಟು ಆರು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೂಕ ಗೇಟ್ ಬಳಿ ನಡೆದಿದೆ.
Advertisement
Advertisement
ಬೈಕ್‍ನಲ್ಲಿದ್ದ ತಾತೇಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಸಂಬಂಧಿ ವೀಣಾ ಮತ್ತು ಮೂವರು ಮಕ್ಕಳಿಗೆ ಗಂಭೀರ ಗಾಯವಾಗಿದೆ. ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಕಾರು ಚನ್ನರಾಯಪಟ್ಟಣ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದು, ಬೈಕ್‍ನಲ್ಲಿದ್ದವರು ಬೂಕನಬೆಟ್ಟದ ಕಡೆ ಹೋಗಲು ಬೈಕ್ ತಿರುಗಿಸಿದ್ದಾರೆ. ಈ ವೇಳೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
Advertisement
Advertisement
ಗಾಯಾಳುಗಳನ್ನು ತಕ್ಷಣವೇ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‍ನಲ್ಲಿದ್ದವರು ಹೆಬ್ಬಳಲು ಗ್ರಾಮದವರು, ಸಂಬಂಧಿಕರ ಮನೆಗೆ ಹೋಗುತ್ತಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.