ಹಾಸನ: ಹಲವೆಡೆ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಅರಸೀಕೆರೆ ಪೊಲೀಸರು ಬಂಧಿಸಿದ್ದಾರೆ.
ರಂಗ ಬಂಧಿತ ಆರೋಪಿಯಾಗಿದ್ದು, ರಂಗನ ಗೆಳೆಯ ಮಟ್ಟನವಿಲೆ ಮಂಜ ಪೊಲೀಸರಿಗೆ ಸಿಗದೆ ಪರಾರಿಯಾಗಿದ್ದಾನೆ. ಆರು ರಾಯಲ್ ಎನ್ಫೀಲ್ಡ್ ಸೇರಿದಂತೆ 18 ಲಕ್ಷ ರೂ. ಮೌಲ್ಯದ ಸುಮಾರು 15 ಬೈಕ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗೆ ಅರಸೀಕೆರೆ ಸೇರಿದಂತೆ ಜಿಲ್ಲೆಯ ಹಲವೆಡೆ ಬೈಕ್ ಕಳ್ಳತನ ಪ್ರಕರಣ ಹೆಚ್ಚಾಗಿದ್ದವು. ಹೀಗಾಗಿ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದರು. ಅರಸೀಕೆರೆ ರೈಲ್ವೆ ನಿಲ್ದಾಣದ ಬಳಿ ಆರೋಪಿಗಳಾದ ರಂಗ ಮತ್ತು ಮಟ್ಟನವಿಲೆ ಮಂಜ ಕದ್ದ ಬೈಕ್‍ನೊಂದಿಗೆ ಅನುಮಾನಾಸ್ಪದವಾಗಿ ಓಡಾಡುವಾಗ ಪೊಲೀಸರು ರಂಗನನ್ನು ಬಂಧಿಸಿದ್ದಾರೆ. ಆದರೆ ಮಂಜ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.