ಬೆಂಗಳೂರು: ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಜನ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜನರ ಕಷ್ಟವನ್ನು ನೋಡಲಾಗದೆ ನಗರದ ಇಬ್ಬರು ಹವ್ಯಾಸಿ ಬೈಕ್ ರೈಡರ್ಸ್ ಸಹೋದರರು ಅಂಬುಲೆನ್ಸ್ ಡ್ರೈವರ್ ಗಳಾಗಿ ಜನರ ಸಹಾಯಕ್ಕೆ ಮುಂದಾಗಿದ್ದಾರೆ.
Advertisement
ಬೆಂಗಳೂರಿನ ಸಹೋದರರಾದ ಮುರ್ತಾಜಾ ಜುನೈದ್ ಮತ್ತು ಮುತೀಬ್ ಜೊಹೆಬ್ ಹವ್ಯಾಸಿ ಬೈಕ್ ರೈಡರ್ಸ್ ಆಗಿ ಹಲವು ಊರುಗಳನ್ನು ಸುತ್ತಿದ್ದಾರೆ. ಆದರೆ ಇದೀಗ ಕೊರೊನಾ ಎರಡನೇ ಅಲೆಯಿಂದ ಜನ ಅನುಭವಿಸುತ್ತಿರುವ ಕಷ್ಟವನ್ನು ನೋಡಿ ಜನರ ಸೇವೆ ಮಾಡಲು ಅಂಬುಲೆನ್ಸ್ ಒಂದರಲ್ಲಿ ಡ್ರೈವರ್‍ಗಳಾಗಿ ಕೊರೊನಾ ಸೋಂಕಿತರಿಗೆ ನೆರವಾಗುತ್ತಿದ್ದಾರೆ.
Advertisement
ಈ ಕುರಿತು ಸ್ಥಳೀಯ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಮುರ್ತಾಜಾ ಜುನೈದ್, ಕೊರೊನಾ ಎರಡನೇ ಅಲೆಯಿಂದಾಗಿ ಜನ ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾರೆ. ನಾನು ನೋಡಿದಂತೆ ಜನ ಆಕ್ಸಿಜನ್, ಬೆಡ್ ಮತ್ತು ಅಂಬುಲೆನ್ಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಲವು ಜನ ಆಟೋ, ಬೈಕ್‍ಗಳಲ್ಲಿ ಆಸ್ಪತ್ರೆಗೆ ಹೋಗುವುದನ್ನು ನೋಡೊದ್ದೇನೆ. ಹಾಗಾಗಿ ಅಂತವರ ನೆರವಿಗೆ ಬರಲು ಕಳೆದ ಮೂರು ವಾರಗಳಿಂದ ಅಂಬುಲೆನ್ಸ್ ಒಂದರಲ್ಲಿ ಡ್ರೈವರ್ ಗಳಾಗಿ ಸೇವೆ ಮಾಡುತ್ತಿದ್ದೇವೆ ಎಂದಿದ್ದಾರೆ.
Advertisement
Advertisement
ಜನರ ಕಷ್ಟ ಕಾಲದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯು ಇತರರಿಗೆ ನೆರವಾಗಬೇಕು. ಇದೀಗ ನಾವು ಅಂಬುಲೆನ್ಸ್ ಡ್ರೈವರ್ಸ್ ಆಗುವ ಮೂಲಕ ಜನರ ನೆರವಿಗೆ ಮುಂದಾಗಿರುವುದು ಖುಷಿ ಕೊಡುತ್ತಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 2,67,334 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆ ಕಂಡಿದೆ.