ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗ್ತಿದ್ದವನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Public TV
1 Min Read
bij rescue

ವಿಜಯಪುರ: ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗಿದ್ದವನನ್ನು ಅಗ್ನಿಶಾಮಕ ಸಿಬ್ಬಂದಿ ಪ್ರಾಣದ ಹಂಗು ತೊರೆದು ರಕ್ಷಿಸಿದ್ದಾರೆ.

ವಿಜಯಪುರ ತಾಲೂಕಿನ ಅತ್ತಾಲಟ್ಟಿ ಬಳಿ ಘಟನೆ ನಡೆದಿದ್ದು, ಅತ್ತಾಲಟ್ಟಿ ನಿವಾಸಿ ಬಂದೇನವಾಜ್ ಮೊಕಾಶಿಯವರನ್ನು ರಕ್ಷಣೆ ಮಾಡಲಾಗಿದೆ. ಸಕಾಲಕ್ಕೆ ತೆರಳಿ ಅಗ್ನಿಶಾಮಕ ದಳದ ಸಿಬ್ಬಂದಿ ವ್ಯಕ್ತಿಯ ಪ್ರಾಣ ಉಳಿಸಿದ್ದಾರೆ.

vlcsnap 2020 10 12 13h58m32s380 e1602491885205

ಸಾರವಾಡದಿಂದ ಅತ್ತಾಲಟ್ಟಿಗೆ ಹೊರಟಿದ್ದ ವೇಳೆ ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ವ್ಯಕ್ತಿ ಕೊಚ್ಚಿ ಹೋಗಿದ್ದ. ಕಳೆದ ರಾತ್ರಿ ನಡೆದ ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಹಳ್ಳದಲ್ಲಿನ ಮುಳ್ಳಿನ ಕಂಟಿಗೆ ಸಿಲುಕಿಕೊಂಡಿದ್ದ ವ್ಯಕ್ತಿ ಬಂದೇನವಾಜ್, ಬಳಿಕ ತನ್ನ ಮೊಬೈಲ್ ನಿಂದ ಮನೆಯವರಿಗೆ ವಿಷಯ ಮುಟ್ಟಿಸಿದ್ದ. ನಂತರ ಮನೆಯವರು ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ತಕ್ಷಣವೇ ಎಚ್ಚೆತ್ತ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

vlcsnap 2020 10 12 13h59m49s066 e1602491809656

ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಿಜಯಪುರ ಅಗ್ನಿಶಾಮಕ ದಳದ ಸಿಬ್ಬಂದಿ ಹಗ್ಗದ ಸಹಾಯದಿಂದ ಬಂದೇನವಾಜ್ ಅವರನ್ನು ರಕ್ಷಣೆ ಮಾಡಿದ್ದಾರೆ. ನೀರಿನ ರಭಸಕ್ಕೆ ಹಳ್ಳದಲ್ಲಿ ಸುಮಾರು 200 ಅಡಿಯಷ್ಟು ದೂರದ ವರೆಗೆ ಕೊಚ್ಚಿಹೋಗಿ ಬಂದೇನವಾಜ್ ಮುಳ್ಳಿಕ ಕಂಟಿಗೆ ಸಿಲುಕಿದ್ದರು.

Share This Article