– ಒಂದರ ಹಿಂದೆ ಮೂರು ಕಾರುಗಳು ಪಲ್ಟಿ
ಬೆಂಗಳೂರು: ಏರ್ಪೋರ್ಟ್ ರಸ್ತೆಯ ಬ್ಯಾಟರಾಯನಪುರ ಫ್ಲೈಓವರ್ ಬಳಿ ಐದು ಕಾರುಗಳ ನಡುವೆ ಸರಣಿ ಅಪಘಾತವಾಗಿದೆ. ಎರಡು ಕಾರು ಪಲ್ಟಿಯಾಗಿದ್ದು. ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೈಕ್ ಸವಾರರ ಜಾಲಿ ರೈಡ್ ನಿಂದಾಗಿ ಈ ಸರಣಿ ಅಪಘಾತ ಸಂಭವಿಸಿದೆ. ನಂದಿಬೆಟ್ಟಕ್ಕೆ ಜಾಲಿ ರೈಡ್ ಹೋಗುತ್ತಿದ್ದ ಬೈಕ್ ಸವಾರರ ಟೀಂ ವೇಗವಾಗಿ ಬಂದು ಕಾರ್ ಓವರ್ ಟೆಕ್ ಮಾಡಿದ್ದಾರೆ. ಗಾಬರಿಯಾದ ಕಾರ್ ಚಾಲಕ ಎದುರು ರಸ್ತೆಗೆ ನುಗ್ಗಿದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದೇ ವೇಳೆ ಎರಡು ಕಡೆಗಳಲ್ಲಿ ಬರುತ್ತಿದ್ದ ಐದು ಕಾರುಗಳು ಪರಸ್ಪರ ಡಿಕ್ಕಿಯಾಗಿ ಮೂರು ಕಾರುಗಳು ಪಲ್ಟಿಯಾಗಿವೆ.
ಈ ಅಪಘಾತದಲ್ಲಿ ಆರು ಜನ ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏರ್ಪೋರ್ಟ್ ರಸ್ತೆಯಲ್ಲಿ ಮೂರು ಕಾರುಗಳು ರಸ್ತೆಗೆ ಬಿದ್ದ ಪರಿಣಾಮ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಹೆಬ್ಬಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಪಘಾತ ವಾಗಿರುವ ಕಾರುಗಳ ತೆರವುಗೊಳಿಸುತ್ತಿದ್ದಾರೆ.