ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೋನಾ ವೈರಸ್ ಪತ್ತೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದ ಶಿವಮೊಗ್ಗ ಮೂಲದ ವ್ಯಕ್ತಿಯಲ್ಲಿ ಈ ರೂಪಾಂತರಿ ವೈರಸ್ ಕಂಡು ಬಂದಿದೆ.
ಒಂದು ವಾರದ ಹಿಂದೆ ದುಬೈನಿಂದ ಬೆಂಗಳೂರಿಗೆ ಬಂದ ವ್ಯಕ್ತಿಯಲ್ಲಿ ದಕ್ಷಿಣ ಆಫ್ರಿಕಾ ವೈರಸ್ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಈ ವ್ಯಕ್ತಿ, ಏರ್‍ಪೋರ್ಟ್‍ನಲ್ಲಿ ಗಂಟಲದ್ರವ ಟೆಸ್ಟ್‍ಗೆ ಕೊಟ್ಟು ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ. ಗಂಟಲು ದ್ರವವನ್ನು ಟೆಸ್ಟ್ ಗೆ ಒಳಪಡಿಸಿದಾಗ ಪಾಸಿಟಿವ್ ಇರೋದು ಪತ್ತೆಯಾಗಿದೆ.
Advertisement
Advertisement
ಪಾಸಿಟಿವ್ ಬಂದ ಸ್ವಾಬ್ ಅನ್ನು ಜೆನೆಟಿಕ್ ಸೀಕ್ವೆನ್ಸ್ ಟೆಸ್ಟ್ ಗೆ ಒಳಪಡಿಸಿದ್ದಾರೆ. ಜೆನೆಟಿಕ್ ಸೀಕ್ವೆನ್ಸ್ ಟೆಸ್ಟ್‍ನಲ್ಲಿ ದಕ್ಷಿಣ ಆಫ್ರೀಕಾ ವೈರಸ್ ಇರುವುದು ಖಚಿತ ಪಟ್ಟಿದೆ. ದಕ್ಷಿಣ ಆಫ್ರಿಕಾ ವೈರಸ್ ಪತ್ತೆಯಾದ ಬೆನ್ನಲ್ಲೆ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ಈ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಹಾಗೂ ಪ್ರಾಥಮಿಕ ಸಂಪರ್ಕ ಪತ್ತೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.
Advertisement
Advertisement
ಈ ಹಿಂದೆ ಬ್ರಿಟನ್ ವೈರಸ್ ಪತ್ತೆಯಾಗಿ ಜನರಲ್ಲಿ ಹೊಸ ಅಲೆಯ ಆತಂಕ ಮೂಡಿಸಿತ್ತು. ಈಗ ದಕ್ಷಿಣ ಆಫ್ರಿಕಾ ವೈರಸ್ ಕೂಡಾ ಕಾಣಿಸಿಕೊಂಡಿದೆ. ಹಲವು ದಿನಗಳ ಬಳಿಕ ಇಂದು ಒಂದೇ ದಿನ ಹೊಸದಾಗಿ ಪಾಸಿಟಿವ್ ಕಾಣಿಸಿಕೊಂಡವರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 760 ಕೇಸ್‍ಗಳು ದಾಖಲಾಗಿದ್ದು, ಬೆಂಗಳೂರು ನಗರದಲ್ಲೇ 488 ಹೊಸ ಪ್ರಕರಣಗಳು ಪತ್ತೆಯಾಗಿವೆ.