– ಬ್ರಿಟೀಷ್ ಆರೋಗ್ಯ ಇಲಾಖೆ ಜೊತೆ ರಾಜ್ಯದ ಕೌಶಲ್ಯಾಭಿವೃದ್ಧಿ ಇಲಾಖೆ ಒಪ್ಪಂದ
– ವಿಶ್ವ ಕನ್ನಡ ಶುಶ್ರೂಷಕರ ಸಂಘ ಉದ್ಘಾಟಿಸಿದ ಆದಿಚುಂಚನಗಿರಿ ಶ್ರೀ
ಬೆಂಗಳೂರು: ಬ್ರಿಟನ್ ರಾಷ್ಟ್ರೀಯ ಆರೋಗ್ಯ ಇಲಾಖೆ (NHS) ಯಿಂದ 1 ಸಾವಿರ ಶುಶ್ರೂಷಕರಿಗೆ ಬೇಡಿಕೆ ಬಂದಿದ್ದು, ಕೋವಿಡ್ ಸಂಕಷ್ಟ ಮುಗಿದ ನಂತರ ಅಷ್ಟೂ ನರ್ಸಿಂಗ್ ಸಿಬ್ಬಂದಿಯನ್ನು ಲಂಡನ್‍ಗೆ ಕಳಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.
ಡಾ.ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯರ ದಿವ್ಯ ಸಾನ್ನಿಧ್ಯದಲ್ಲಿ ‘ವಿಶ್ವ ಕನ್ನಡ ಶುಶ್ರೂಷಾಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ’ದ ಲಾಂಛನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆಗೊಳಿಸಲಾಯಿತು.
ವಿಶ್ವದೆಲ್ಲೆಡೆ ಸೇವೆ ಸಲ್ಲಿಸುತ್ತಿರುವ ರಾಜ್ಯದ ಶುಶ್ರೂಷಕರು #COVID19 ಸಮಯದಲ್ಲಿ ಒಗ್ಗೂಡಿ ನೆರವಾಗುತ್ತಿರುವುದು ಶ್ಲಾಘನೀಯ. pic.twitter.com/ibz4EPzfmM
— Dr. Ashwathnarayan C. N. (@drashwathcn) May 30, 2021
Advertisement
ವರ್ಚುಯಲ್ ವೇದಿಕೆ ಮೂಲಕ ಭಾನುವಾರ ವಿಶ್ವ ಕನ್ನಡ ಶುಶ್ರೂಷಕರ ಸಂಘದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈಗಾಗಲೇ ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ಎನ್‍ಎಚ್‍ಎಸ್ ಜತೆ ಒಪ್ಪಂದಕ್ಕೆ ಸಹಿ ಬಿದ್ದಿದೆ. 1 ಸಾವಿರ ಶುಶ್ರೂಷಕರನ್ನು ಕಳುಹಿಸುವಂತೆ ಅವರು ಕೋರಿದ್ದಾರೆ. ಅದಕ್ಕೆ ಈಗಾಗಲೇ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿನ ವ್ಯವಸ್ಥೆಗೆ ಒಗ್ಗಿ ಕೆಲಸ ಮಾಡುವುದಕ್ಕೆ ಅಗತ್ಯ ಭಾಷೆ, ಸಂವಹನ ಕಲೆ, ಸೇವಾ ಮನೋಭಾವ ಇತ್ಯಾದಿಗಳ ಬಗ್ಗೆ ಎಲ್ಲರಿಗೂ ತರಬೇತಿ ನೀಡಲಾಗುವುದು ಎಂದರು. ಇದನ್ನೂ ಓದಿ: ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ: ಡಿಸಿಎಂ ಅಶ್ವತ್ಥ ನಾರಾಯಣ್
Advertisement
ಇನ್ನೂ ಹೆಚ್ಚಿನ ನರ್ಸಿಂಗ್ ಸಿಬ್ಬಂದಿ ಅಗತ್ಯವಿದ್ದರೆ ಕಳಿಸಲಾಗುವುದು. ಅಲ್ಲದೆ ಬ್ರಿಟನ್ ಜೊತೆಗೆ ಇತರೆ ದೇಶಗಳಿಗೂ ನರ್ಸಿಂಗ್ ಹಾಗೂ ಅರೆವೈದ್ಯಕೀಯ ಸಿಬ್ಬಂದಿಯನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಕೌಶಲ್ಯಾಭಿವೃದ್ಧಿ ಇಲಾಖೆ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.
Advertisement
Advertisement
ನರ್ಸಿಂಗ್ ಸಿಬ್ಬಂದಿಗೆ ಅಧಿಕಾರಿ ಮಟ್ಟದ ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ನಿರ್ಧಾರವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶವನ್ನೂ ಹೊರಡಿಸಿದ್ದಾರೆ. ಅಲ್ಲದೆ ಅವರ ಎಲ್ಲ ಬೇಡಿಕೆಗಳನ್ನೂ ಈಡೇರಿಸಲಾಗಿದೆ. ಜೊತೆಗೆ ದೇಶಾದ್ಯಂತ ಸುಮಾರು 2 ಲಕ್ಷ ನರ್ಸಿಂಗ್ ಸಿಬ್ಬಂದಿಗೆ ಆರೋಗ್ಯ ಕೇಂದ್ರಗಳಲ್ಲಿ ಉದ್ಯೋಗವನ್ನು ಕೊಡಲಾಗಿದೆ ಎಂದು ಡಾ.ಅಶ್ವಥ್ ನಾರಾಯಣ್ ವಿವರಿಸಿದರು.
ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ವಿಶ್ವ ಕನ್ನಡ ಶುಶ್ರೂಷಕರ ಸಂಘವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಎಂ.ಬಿ.ಪಾಟೀಲ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಬೇಲೂರು, ಗೋಪಾಲ ಕುಲಕರ್ಣಿ, ಸಂಘದ ಅಧ್ಯಕ್ಷ ತಮ್ಮಣ್ಣ, ಕಾರ್ಯದರ್ಶಿ ನಾಗರಾಜ್, ಖಜಾಂಚಿ ಹೇಮೇಗೌಡ ಮುಂತಾದವರು ವಿಶ್ವದ ವಿವಿಧ ದೇಶಗಳಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.