ನವದೆಹಲಿ: ಭಾರತ್ ಬಯೋಟೆಕ್ ಕಂಪನಿಯ ಕೊವ್ಯಾಕ್ಸಿನ್ ಬ್ರೆಜಿಲ್, ಇಂಗ್ಲೆಂಡ್, ಭಾರತದ ರೂಪಾಂತರಿ ಕೊರೋನಾ ವೈರಸ್‍ಗೂ ಪರಿಣಾಮಕಾರಿ ಎಂದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಧ್ಯಯನದಲ್ಲಿ ದೃಢಪಟ್ಟಿದೆ.
ನ್ಯಾಷನಲ್ ಇನ್‍ಸ್ಟುಟ್ಯೂಟ್ ಆಫ್ ವೈರಾಲಜಿ ಸಹಯೋಗದಲ್ಲಿ ಐಸಿಎಂಆರ್ ಈ ಅಧ್ಯಯನ ನಡೆಸಿದೆ. ಮಹಾರಾಷ್ಟ್ರದಲ್ಲಿ ಹುಟ್ಟಿದ ಡಬಲ್ ವೈರಸ್ (ಬಿ.1.617) ಕೊರೊನಾ ರೂಪಾಂತರಿ ಮೇಲೂ ಕೊವ್ಯಾಕ್ಸಿನ್ ಪರಿಣಾಮಕಾರಿ ಎಂದು ಅಧ್ಯಯನದಿಂದ ದೃಢಪಟ್ಟಿತ್ತು.
Advertisement
Advertisement
ದೇಶಿ ಲಸಿಕೆ ಕೊವ್ಯಾಕ್ಸಿನ್ ಶೇ.81ರಷ್ಟು ಪರಿಣಾಮಕಾರಿ ಎಂದು ಹೈದರಾಬಾದಿನ ಭಾರತ್ ಬಯೋಟೆಕ್ ಕಂಪನಿ ಈ ಹಿಂದೆ ತಿಳಿಸಿತ್ತು. ಒಟ್ಟು 25,800 ಸ್ವಯಂ ಸೇವಕರ ಮೇಲೆ ಪ್ರಯೋಗ ಮಾಡಿದ್ದು, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಜೊತೆ ನಡೆಸಿದ ಅತ್ಯಂತ ದೊಡ್ಡ ಪ್ರಯೋಗ ಎಂಬುದಾಗಿ ಹೇಳಿತ್ತು.
Advertisement
ಭಾರತ್ ಬಯೋಟೆಕ್ ಕಂಪನಿ ಮೂಗಿನ ಮೂಲಕ ಲಸಿಕೆಯ (ಇಂಟ್ರಾನಾಸಲ್ ವ್ಯಾಕ್ಸಿನ್) ಮೊದಲ ಕ್ಲಿನಿಕಲ್ ಪ್ರಯೋಗ ಆರಂಭಿಸಿದೆ.
Advertisement
ಇಂಟ್ರಾನಾಸಲ್ ವ್ಯಾಕ್ಸಿನ್ ಪ್ರಯೋಗ ಯಶಸ್ವಿಯಾದರೆ ಕೊರೊನಾ ವಿರುದ್ಧದ ಹೋರಾಟದಲ್ಲಿ ಇದು ಗೇಮ್ ಚೇಂಜರ್ ಆಗಲಿದೆ. ಬಹುತೇಕ ಲಸಿಕೆಗಳನ್ನು ಸ್ನಾಯುಗಳ ಮೂಲಕ ನೀಡಲಾಗುತ್ತದೆ. ಈಗ ನೀಡಲಾಗುತ್ತಿರುವ ಕೊರೊನಾ ಲಸಿಕೆಯನ್ನು ಸೂಜಿಯ ಮೂಲಕ ದೇಹಕ್ಕೆ ಕಳುಹಿಸಲಾಗುತ್ತದೆ. ಆದರೆ ಈ ಲಸಿಕೆಯನ್ನು ಮೂಗಿನ ಹೊಳ್ಳೆಗಳ ಒಳಗಡೆ ಸಿಂಪಡಿಸಲಾಗುತ್ತದೆ. ಹೀಗಾಗಿ ಇದರಲ್ಲಿ ಸೂಜಿಯ ಬಳಕೆಯ ಅಗತ್ಯವೇ ಇರುವುದಿಲ್ಲ.