– ಸಹಾಯಕ್ಕಾಗಿ ಸರ್ಕಾರದ ಮೊರೆ ಹೋದ ಕುಟುಂಬಸ್ಥರು
ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಎದುರಾಗಿದೆ. ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕನೊಬ್ಬ ಜೀವನ್ಮರಣ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಆನಂದ ಕುಲಾಲಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವ ಯುವಕ. ಅಥಣಿ ತಾಲೂಕು ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ ಕುಲಾಲಿ ಮೇ 5ರಂದು ಕೋವಿಡ್ ಟೆಸ್ಟ್ ಮಾಡಿಸಿದ್ದು, ಮೇ 7ರಂದು ಕೊರೊನಾ ದೃಢವಾಗಿತ್ತು.
Advertisement
Advertisement
ಕೋವಿಡ್ ದೃಢಪಡುತ್ತಿದ್ದಂತೆಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಯುಕನನ್ನು ಹುಕ್ಕೇರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಬಳಿಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ವೈದ್ಯರು ರೆಫರ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮೇ 10ರಂದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Advertisement
ಮುಖ ಬಾವು ಬರುತ್ತಿದ್ದು ಇಎನ್‍ಟಿ ಸ್ಪೆಷಲಿಸ್ಟ್ ಬಳಿ ತೆರಳಲು ಸಲಹೆ ನೀಡಲಾಗಿತ್ತು. ಬಳಿಕ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ಆನಂದ ದಾಖಲಾದನು. ಈ ವೇಳೆ ಬ್ಲ್ಯಾಕ್ ಫಂಗಸ್ ಆಗಿದೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.
Advertisement
ಕೋವಿಡ್‍ನಿಂದ ಗುಣಮುಖ ಆದ ಬಳಿಕ ಸರ್ಜರಿ ಮಾಡಬೇಕು ಎಂದು ವೈದ್ಯರು ಹೇಳುತ್ತಿದ್ದಾರೆ. ಹೀಗಾಗಿ ಸದ್ಯ ಯುವಕನ ಕುಟುಂಬಸ್ಥರು ರಾಜ್ಯ ಸರ್ಕಾರ ತಮ್ಮ ನೆರವಿಗೆ ಬರುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.